ಚಿಕ್ಕಮಗಳೂರು

ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

Published On :

ಕ್ಕಮಗಳೂರು: ಜಿಲ್ಲೆಯ 66 ಕೇಂದ್ರಗಳಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿತು. ಈ ಬಾರಿ ಜಿಲ್ಲೆಯಲ್ಲಿ 15,970 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಪ್ರಥಮ ಭಾಷೆಯ ಪರೀಕ್ಷೆ ಶುಕ್ರವಾರ ನಡೆದಿದ್ದು, 15,337 ವಿದ್ಯಾರ್ಥಿಗಳು ಹಾಜರಾಗಿದ್ದರು. 633 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಜಿಲ್ಲೆಯ ಚಿಕ್ಕಮಗಳೂರು ತಾಲೂಕು- 19, ಬೀರೂರು ವಲಯ- 8, ಕಡೂರು ತಾಲೂಕು- 11, ಕೊಪ್ಪ ತಾಲೂಕು- 4, ಮೂಡಿಗೆರೆ ತಾಲೂಕು- 5, ಎನ್.ಆರ್. ಪುರ ತಾಲೂಕು- 4, ಶೃಂಗೇರಿ- 2 ಹಾಗೂ ತರೀಕೆರೆ ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳು ತೆರೆಯಲಾಗಿದ್ದು, ಈ ಎಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ಪರೀಕ್ಷೆ ನಡೆಯಿತು. ಮಾ. 28 ರಿಂದ ಏಪ್ರಿಲ್ 9 ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.
ಬಂದೋಬಸ್ತ್
ಬಾಳೆಹೊನ್ನೂರು: ಪ್ರಸ್ತುತ ವರ್ಷದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭಗೊಂಡಿದ್ದು, ಸ್ಥಳೀಯ ಜಗದ್ಗುರು ರೇಣುಕಾಚಾರ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಬಾಳೆಹೊನ್ನೂರು ವ್ಯಾಪ್ತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆದಿದ್ದು, ರೇಣುಕಾಚಾರ್ಯ ಸಂಯುಕ್ತ ಪಪೂ ಕಾಲೇಜಿನಲ್ಲಿ 246 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರೌಢಶಾಲೆಯಲ್ಲಿ 237 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 483 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷಾ ಕೇಂದ್ರದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.