ಚಿಕ್ಕಮಗಳೂರು

ಸಿಎಂಗೆ ಜಿಲ್ಲೆಯಲ್ಲಿ ಮತಯಾಚನೆ ನೈತಿಕ ಹಕ್ಕಿಲ್ಲ: ರಾಮಸ್ವಾಮಿ

Published On :

ಕೊಪ್ಪ: ಜಿಲ್ಲೆ ಬಗ್ಗೆ ತಾತ್ಸರ ಮನೋಭಾವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲ್ಲಿಗೆ ಬಂದು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಎಸ್.ಎನ್. ರಾಮಸ್ವಾಮಿ ತಿಳಿಸಿದರು.
ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಾವಧಿಯಲ್ಲಿ ಇರುವಾಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಎಂಎಫ್ ಡೈರಿ ಸ್ಥಾಪನೆಗೆ ಬಜೆಟ್‌ನಲ್ಲಿ ರು. 10 ಕೋಟಿ ಇಡಲಾಗಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಕ್ಷಣ ಡೈರಿ ಸ್ಥಾಪನೆಗೆ ಇಟ್ಟಿದ್ದ ಹಣ ತಡೆ ಹಿಡಿದರು ಎಂದವರು ಹೇಳಿದರು.
ಕನಸಿಗೆ ಕೊಡಲಿ ಪೆಟ್ಟು: ಜಿಲ್ಲೆಯಲ್ಲಿ ಕೆಎಂಎಫ್ ಡೈರಿ ಸ್ಥಾಪನೆಯಿಂದ ಸ್ವಯಂ ಉದ್ಯೋಗ ಪ್ರಾರಂಭ ಮಾಡುವುದರೊಂದಿಗೆ ನೂತನ ಭವಿಷ್ಯ ಕಟ್ಟಿಕೊಳ್ಳುವ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಮಹಿಳೆಯರ ಕನಸಿಗೆ ಕೊಡಲಿ ಪೆಟ್ಟು ನೀಡಿ, ಅವರ ಉಜ್ವಲ ಭವಿಷ್ಯದ ಕನಸನ್ನು ನೂಚ್ಚು ನೂರು ಮಾಡಿದಂತಹ ಸಿದ್ದರಾಮಯ್ಯನವರಿಗೆ ಇಲ್ಲಿ ಮತಯಾಚನೆ ಮಾಡುವ ನೈತಿಕತೆ ಇದೇಯೇ ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಪದ್ಮವತಿ ರಮೇಶ್, ಬಿಜೆಪಿ ಕ್ಷೇತ್ರ ಕಾರ್ಯದರ್ಶಿ ಅದ್ದಡ ಸತೀಶ್, ಮುಖಂಡ ಪುಣ್ಯಪಾಲ್,ಬಿ.ಎನ್. ಭಾಸ್ಕರ್ ರಾವ್,ಬಿ.ಆರ್. ನಾರಾಯಣ್ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.