ಕಾಂಗ್ರೆಸ್ಗೆ ಗೆಲ್ಲುವ ವಿಶ್ವಾಸವಿಲ್ಲ
ನರಸಿಂಹರಾಜಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ಬರುವ ಆತ್ಮವಿಶ್ವಾಸ ಇಲ್ಲದೆ ಇರುವುದರಿಂದಲೇ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಿಲ್ಲ ಎಂದು ಶಾಸಕ ಡಿ.ಎನ್. ಜೀವರಾಜ್ ಲೇವಡಿ ಮಾಡಿದರು.
ಶನಿವಾರ ನಡೆದ ಬಿಜೆಪಿ ಕಸಬಾ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆ ಇರುವುದರಿಂದಲೇ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಮೊದಲೇ ಘೋಷಣೆ ಮಾಡಿದ್ದೇವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 68 ಸ್ಥಾನಕ್ಕಿಂತ ಹೆಚ್ಚು ಸ್ಥಾನ ಪಡೆಯವುದಿಲ್ಲ. ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವೇ ನಿರ್ಣಾಮವಾಗಲಿದೆ ಎಂದರು.
ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದಾಗ ಜಯಪ್ರಕಾಶ ಹೆಗ್ಡೆ ಅವರು ಬಂದರು ಸಚಿವರಾಗಿದ್ದರು. ಆಗ ಅವರು ತಮ್ಮ ಖಾತೆಯಲ್ಲಿ ಏನು ಸಾಧನೆ ಮಾಡಿದ್ದರು ಎಂದು ಜನತೆಗೆ ಹೇಳಲಿ ಎಂದು ಸವಾಲು ಹಾಕಿದರು. ಹಾಲಿ 1 ವರ್ಷ 11 ತಿಂಗಳು ಲೋಕಸಭಾ ಸದಸ್ಯರಾಗಿದ್ದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಮಲೆನಾಡಿನ ಸಮಸ್ಯೆಗಳನ್ನು ಅವರು ಬಗೆಹರಿಸಬಹುದಿತ್ತು. ಬದುಕಿಗಾಗಿ 1 ಎಕ್ರೆ ಅಥವಾ ಅರ್ಧ ಎಕರೆ ಒತ್ತುವರಿ ಮಾಡಿದ ರೈತರನ್ನು ಕಾಂಗ್ರೆಸ್ ಸರ್ಕಾರವೇ ತೆರವುಗೊಳಿಸುತ್ತಿದೆ.ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಒತ್ತುವರಿ ತೆರವು ಮಾಡಲು ಬಿಟ್ಟಿರಲಿಲ್ಲ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಬಿಜೆಪಿ ಪರ ಪ್ರಚಾರ ಮಾಡಬೇಕು. ಪ್ರತಿ ಬೂತ್ನಲ್ಲೂ ಮತ ಹೆಚ್ಚಳ ಆಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಬಿಜೆಪಿ ಮುಖಂಡ ರಾಮಸ್ವಾಮಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ದೇಶದ ರಕ್ಷಣೆಗಾಗಿ ಕಾಂಗ್ರೆಸ್ ಹಠಾವೋ ಭಾರತ ಬಚಾವೋ ಎಂಬ ಘೋಷಣೆಯೊಂದಿಗೆ ಬಿಜೆಪಿ ಪ್ರಚಾರ ಕಾರ್ಯಕೈಗೊಳ್ಳಲಿದೆ. ದೇಶ ಕಂಡ ದುರ್ಬಲ ಪ್ರಧಾನಿ ಮನಮೋಹನ್ ಸಿಂಗ್ ಎಂದು ಅವರು ಟೀಕಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಸುಜಾತ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನೀಲೇಶ್, ಕಸಬಾ ಹೋಬಳಿ ಘಟಕದ ಅಧ್ಯಕ್ಷೆ ಕೆಸುವೆ ಮಂಜುನಾಥ್,ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಎಸ್. ಗೋಪಾಲ್, ವೈ.ಎಸ್. ಗಣೇಶ್, ಬಿಜೆಪಿ ಮುಖಂಡರಾದ ಪುಣ್ಯಪಾಲ್, ಸಂಪತ್ಕುಮಾರ್, ಪಿ.ಜೆ. ಆಂಟೋನಿ, ಎನ್.ಜಿ. ನಾಗೇಶ್, ಶಬೀರ್, ಜಯರಾಂ, ಮಲ್ಲಿಕಾ ನವೀನ್, ಆಶಾ ಮೋಹನ್, ಪ್ರಸನ್ನ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

