ಇಮ್ರಾನ್ ಮಸೂದ್ ಹೇಳಿಕೆಗೆ ನಮೋ ಬ್ರಿಗೇಡ್ ಖಂಡನೆ
ಸಾಗರ: ಉತ್ತರ ಪ್ರದೇಶದ ಸರಹಾನ್ಪುರ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕುರಿತು ಪ್ರಚೋದನಾಕಾರಿಯಾಗಿ ಮಾತನಾಡಿರುವುದನ್ನು ನಮೋ ಬ್ರಿಗೇಡ್ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ.
ಚುನಾವಣೆ ಸಮಯದಲ್ಲಿ ಇಮ್ರಾನ್ ಮಸೂದ್ ನೀಡಿರುವ ಹೇಳಿಕೆ ದೇಶದಾದ್ಯಂತ ಕೋಮು ಗಲಭೆಗಳಿಗೆ ಕಾರಣವಾಗಲಿದೆ. ಇಂತಹ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ಮೇಲೆ ರಾಷ್ಟ್ರೀಯ ಸುರಕ್ಷತಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ, ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಮುಲಾಯಂಸಿಂಗ್ ನೇತೃತ್ವದ ಸಮಾಜವಾದಿ ಹಾಗೂ ಕಾಂಗ್ರೆಸ್ ಪಕ್ಷವು ಕೋಮುವಾದಿ ಪಕ್ಷಗಳಾಗಿದ್ದು, ಇಮ್ರಾನ್ ಮಸೂದ್ ಮೇಲೆ ಕಠಿಣ ಕ್ರಮ ಕೈಗೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನಮೋ ಬ್ರಿಗೇಡ್ ತಾಲೂಕು ಮುಖ್ಯ ಸಂಚಾಲಕ ಕೆ.ಎಲ್. ಭೋಜರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆ ಇಂದು
ಚಿಕ್ಕಮಗಳೂರು: ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಚಂದ್ರಪ್ಪ ತಿಳಿಸಿದ್ದಾರೆ. ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷ ಶಾಖೀರ್ಹುಸೇನ್(ಮುನ್ನಾ) ಅವರು ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಬಿ.ಬಿ. ನಿಂಗಯ್ಯ, ವೈಎಸ್ವಿ ದತ್ತ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಚ್. ದೇವರಾಜ್, ಮಾಜಿ ಶಾಸಕ ಎಸ್.ಎಲ್. ಧರ್ಮೇಗೌಡ, ಜಿಲ್ಲಾಧ್ಯಕ್ಷ ಎಚ್.ಎಸ್. ಮಂಜಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಎಂ. ಅಶೋಕ್ ಹಾಗೂ ರಾಜ್ಯ ಉಪಾಧ್ಯಕ್ಷ ಎಸ್.ವೈ. ಮುಕ್ತಿಯಾರ್ ಅಹ್ಮದ್ ಹಾಗೂ ಪಕ್ಷದ ಎಲ್ಲಾ ಪದಾದಿಕಾರಿಗಳು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

