ಚಿಕ್ಕಮಗಳೂರು

ಸಾಹಿತ್ಯದಿಂದ ಓದುಗನಿಗೆ ರಸಾನುಭವ

Published On :

ಶೃಂಗೇರಿ: ಒಳ್ಳೆಯ ಸಾಹಿತ್ಯ ಬದುಕಿನಲ್ಲಿ ಆನಂದ ನೀಡುವುದರ ಜತೆಗೆ ಓದುಗನಿಗೆ ರಸಾನುಭವ ನೀಡುತ್ತದೆ ಎಂದು ಎಸ್. ಗುರುಮೂರ್ತಿ ತಿಳಿಸಿದರು.
ಪಟ್ಟಣದ ಚಪ್ಪರದಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಜಿಲ್ಲಾ ಕಸಾಪ ವತಿಯಿಂದ ಆಯೋಜಿಸಲಾಗಿದ್ದ ಎ.ಆರ್. ಗೋಪಾಲಗೌಡ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಬದುಕು ಮತ್ತು ಸಾಹಿತ್ಯ ಕುರಿತು ಉಪನ್ಯಾಸ ನೀಡಿದರು.
ಸಾಹಿತ್ಯ ಬದುಕನ್ನು ಹಸನಾಗಿ ಮಾಡುತ್ತದೆ. ಒಳ್ಳೆಯ ಸಾಹಿತ್ಯಕ್ಕೆ ಸ್ವಾಸ್ಥ್ಯ ಸಮಾಜ ನಿರ್ಮಿಸುವ ಅದ್ಭುತ ಶಕ್ತಿಯಿದೆ. ಸಾಹಿತ್ಯಕ್ಕೆ ಬೆಲೆ ಕಟ್ಟಲಾಗದು ಎಂದರು.
ಕಸಾಪ ಜಿಲ್ಲಾ ಕೋಶಾಧ್ಯಕ್ಷ ನೆ.ಲ. ಸುಬ್ರಮಣ್ಯ, ಸತ್ಯನಾರಾಯಣ,ಚಂದ್ರಕಲಾ, ರವಿಕುಮಾರ್, ಹೆಗ್ಗದ್ದೆ ಶಿವಾನಂದರಾವ್, ಕೃಷ್ಣಮೂರ್ತಿ, ಅಂಗುರ್ಡಿ ದಿನೇಶ್, ಶೃಂಗೇರಿ ಸುಬ್ಬಣ್ಣ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.