ಸಾಧನೆಗೆ ಆತ್ಮವಿಶ್ವಾಸ ಮುಖ್ಯ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮಾ. 30
ಯುವ ಜನತೆ ಬದುಕಿನಲ್ಲಿ ಉನ್ನತಿ ಹೊಂದಿ ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಬೇಕಾದರೆ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಹೇಳಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ, ತುಮಕೂರಿನ ಪ್ರಗತಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಗರದ ಸ್ಕೌಟ್ಸ್ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಮೊಬೈಲ್ ರಿಪೇರಿ ಕಂಪ್ಯೂಟರ್ ಹಾರ್ಡ್ವೇರ್, ಬ್ಯೂಟಿಷಿಯನ್, ಸಿ.ಸಿ. ಕ್ಯಾಮೆರಾ ಫಿಕ್ಸಿಂಗ್ ಮತ್ತು ಕರಕುಶಲ ವಸ್ತುಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಕ್ಯೂರೇಟ್ ಇನ್ ಲಾಸಲ್ಯೂಷನ್ ಸಂಸ್ಥೆಯ ವ್ಯವಸ್ಥಾಪಕ ಶರತ್ ಕುಮಾರ್ ಮಾತನಾಡಿ, ಯುವ ಜನತೆ ಬದುಕಿನಲ್ಲಿ ಮುಂದೆ ಬರಬೇಕಾದರೆ ಸಂಕೋಚ, ಭಯ ಬಿಟ್ಟು ಯಾವುದಾದರೂ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರಗತಿ ಟ್ರೈನಿಂಗ್ ಇನ್ಸ್ಟಿಟ್ಯೂಟ್ನ ಅಧ್ಯಕ್ಷ ಎಸ್.ಆರ್. ಸಂದರ್ಶ್ ಮಾತನಾಡಿ, ತರಬೇತಿ ಶಿಬಿರಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ ರಕ್ಷಣಾ ವೇದಿಕೆಗೆ ಕೃತಜ್ಞತೆ ಸಲ್ಲಿಸಿದರು. ಶಿಬಿರದಲ್ಲಿ ತರಬೇತಿ ಪಡೆದವರಿಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು.
ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ, ನಗರಾಧ್ಯಕ್ಷ ವಿನೋದ್ ಕುಮಾರ್, ಉಪಾಧ್ಯಕ್ಷ ಕುಮಾರ್, ತರಬೇತುದಾರರಾದ ಶಿವರಾಂ, ಛಾಯಾ, ಬಿ.ಎಂ. ಶೃತಿ ಉಪಸ್ಥಿತರಿದ್ದರು. ಚಿಕ್ಕಮಗಳೂರಿನ ಸ್ಕೌಟ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತೇಗೂರು ಜಗದೀಶ್ ತರಬೇತಿ ಪಡೆದವರಿಗೆ ಪ್ರಮಾಣಪತ್ರವನ್ನು ವಿತರಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

