ಚಿಕ್ಕಮಗಳೂರು

ಭೋಜೇಗೌಡರಿಗೆ ವಕೀಲರ ಸಂಘ ಅಭಿನಂದನೆ

Published On :

ಚಿಕ್ಕಮಗಳೂರು: ಭಾರತೀಯ ವಕೀಲರ ಪರಿಷತ್ತಿನ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ನ್ಯಾಯವಾದಿ ಎಸ್.ಎಲ್. ಭೋಜೇಗೌಡ ಅವರನ್ನು ವಕೀಲರ ಸಂಘ ನಗರದಲ್ಲಿ ಇತ್ತೀಚೆಗೆ ಅಭಿನಂದಿಸಿತು.
ಜಿಲ್ಲಾ ನ್ಯಾಯಾಲಯ ಕಟ್ಟಡದ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ. ಎಚ್.ಎಸ್. ಕಮಲ ಅವರು ಬೋಜೇಗೌಡ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೋಜೇಗೌಡ ಅವರು ತಮಗೆ ದೊರೆತಿರುವ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಿ. ಬದುಕಿನಲ್ಲಿ ಇನ್ನೂ ಎತ್ತರಕ್ಕೇರಲಿ, ಕಾನೂನು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಶ್ರಮಿಸಲಿ ಎಂದು ಹಾರೈಸಿದರು.
ಸನ್ಮಾನಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಎಸ್.ಎಲ್. ಬೋಜೇಗೌಡ, ತಾವು ಬದುಕಿನಲ್ಲಿ ಯಶಸ್ಸಿನ ಮೆಟ್ಟಿಲೇರಲು ಜಿಲ್ಲೆಯ ವಕೀಲ ಮಿತ್ರರ ಸಹಕಾರ ಮತ್ತು ಪ್ರೋತ್ಸಾಹವೇ ಕಾರಣ ಎಂದರು.
ತಾವು ಯಶಸ್ಸಿನ ಮೆಟ್ಟಿಲೇರಲು ಸಹಕರಿಸಿದ ಜಿಲ್ಲೆಯ ಮತ್ತು ನಗರದ ವಕೀಲರಿಗೆ ಕೃತಜ್ಞತೆ ಸಲ್ಲಿಸಿದ ಅವರು, ದೇಶದ ನ್ಯಾಯವಾದಿಗಳ ನೋವು, ನಲಿವು ಮತ್ತು ಅವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದರ ಜೊತೆಗೆ ನಗರದಲ್ಲಿ ಕಾನೂನು ಕಾಲೇಜು ಸ್ಥಾಪನೆಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ನಗರದಿಂದ ವರ್ಗಾವಣೆಗೊಂಡಿರುವ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರನ್ನು ಇದೇ ವೇಳೆ ಸನ್ಮಾನಿಸಿ ಬೀಳ್ಕೊಡಲಾಯಿತು.
ವಕೀಲರ ಸಂಘದ ಅಧ್ಯಕ್ಷ ಅಪ್ತಾಬ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಐ.ಎಸ್. ತೇಜಸ್ವಿ ಕಾರ್ಯಕ್ರಮವನ್ನು ನಿರೂಪಿಸಿದರು. ಉಪಾಧ್ಯಕ್ಷ ಎಚ್.ಎಂ. ರಘುನಾಥ್ ಸ್ವಾಗತಿಸಿ, ನ್ಯಾಯವಾದಿ ಡಿ.ಬಿ. ಸುಜೀಂದ್ರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.