ಸಹಕಾರದಿಂದ ಸಂಸ್ಥೆ ಅಭಿವೃದ್ಧಿ
ಕ.ಪ್ರ.ವಾರ್ತೆ, ಮೂಡಿಗೆರೆ, ಮೇ 1 ಇಂದಿನ ದಿನಗಳಲ್ಲಿ ಕಾರ್ಮಿಕರ ಮತ್ತು ಆಡಳಿತ ವರ್ಗದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕಾರ್ಮಿಕರು ಆಡಳಿತ ವರ್ಗದೊಂದಿಗೆ ಕೈ ಜೋಡಿಸಿ ಸಹಕಾರ ನೀಡಿದಲ್ಲಿ ಅಭಿವೃದ್ಧಿ ಹೊಂದುವುದರೊಂದಿಗೆ ಸಂಸ್ಥೆ ಹೆಚ್ಚಿನ ಲಾಭಗಳಿಸಲು ಸಾಧ್ಯ ಎಂದು ಕರಾರಸಾ ಸಂಸ್ಥೆ ಘಟಕ ವ್ಯವಸ್ಥಾಪಕ ರವಿ ಆಚಾರ್ ತಿಳಿಸಿದರು.
ಕೆಎಸ್ಆರ್ಟಿಸಿ ಘಟಕದಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ಮತ್ತು ವರ್ಕರ್ ಯೂನಿಯನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಮಿಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಕಾರ್ಮಿಕರ ಮತ್ತು ಆಡಳಿತ ವರ್ಗದ ನಡುವೆ ಯಾವುದೇ ಭಿನ್ನಾಭಿಪ್ರಾಯ ಮೂಡದಂತೆ ನಾವೆಲ್ಲಾ ಒಂದೇ ಎಂಬ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಮನವಿ ಮಾಡಿದರು.
ಸಿಪಿಐ ರಾಜ್ಯ ಸಂಘಟನಾ ಕಾರ್ಯದರ್ಶಿ ಸಾತಿ ಸುಂದರೇಶ್ ಧ್ವಜಾರೋಹಣ ನೆರವೇರಿಸಿದರು.
ಸಂಘದ ಕಾರ್ಯದರ್ಶಿ ಕೆ. ಪೆದ್ದಣ್ಣ ಮಾತನಾಡಿ, ಕಾರ್ಮಿಕರು ಶೋಷಣೆಗೊಳಗಾದಾಗ ನ್ಯಾಯಕ್ಕಾಗಿ ಹೋರಾಡಲು ಪ್ರತಿಯೊಬ್ಬರೂ ಸಿದ್ದರಿರುವಂತೆ ಹೇಳಿದರು. ಮುಂದಿನ ದಿನಗಳಲ್ಲಿ ಕಾರ್ಮಿಕ ದಿನಾಚರಣೆ ನೆಪ ಮಾತ್ರದ ದಿನಾಚರಣೆ ಯಾಗದೆ ಹಬ್ಬದ ಆಚರಣೆಯನ್ನಾಗಿಸುವಂತೆ ಮಾಡಲು ಕಾರ್ಮಿಕರಿಗೆ ತಿಳಿಸಿದರು. ಸಂತೋಷ, ಉಲ್ಲಾಸ, ಅಚ್ಯುತ್, ಕೃಷ್ಣಮೂರ್ತಿ ಮ್ಚೂದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

