ಚಿಕ್ಕಮಗಳೂರು

ನೀರಿಗೆ ಹಣದ ಕೊರತೆ ಇಲ್ಲ: ಡಿಸಿ

Published On :

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಣದ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದ್ದಾರೆ.
ಈಗಾಗಲೇ ತರೀಕೆರೆ ತಾಲೂಕಿಗೆ 1 ಕೋಟಿ, ಚಿಕ್ಕಮಗಳೂರು ತಾಲೂಕಿಗೆ 6 ಲಕ್ಷ, ಕಡೂರು ತಾಲೂಕಿಗೆ 50.20 ಲಕ್ಷ ಬಿಡುಗಡೆ ಮಾಡಲಾಗಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಸರಬರಾಜಿಗಾಗಿ 2.10 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ತಿಳಿಸಿದರು.
ಬರಪೀಡಿತ ಪ್ರದೇಶಗಳಿಗೆ ಬಿಡುಗಡೆಯಾಗಿರುವ ಹಣವನ್ನು ಕೊಳವೆ ಬಾವಿ ಆಳಪಡಿಸಲು, ಪಂಪ್‌ಲೈನ್ ಅಳವಡಿಸಲು ಹಾಗೂ ಜಾನುವಾರುಗಳಿಗೆ ನೀರಿನ ತೊಟ್ಟಿ, ಮೇವು ಖರೀದಿಗೆ ಮಾತ್ರ ಬಳಸಿಕೊಳ್ಳಲು ಅವಕಾಶ ಇದೆ. ಬರಪೀಡಿತ ಕಡೂರು ತಾಲೂಕಿನಲ್ಲಿ ಹೊಸದಾಗಿ ಕೊರೆಸಿರುವ ಬೋರ್‌ವೆಲ್‌ಗಳಿಗೆ ಬರದಲ್ಲಿ ಬಿಡುಗಡೆಯಾಗಿರುವ ಹಣವನ್ನು ಬಳಸಿಕೊಳ್ಳುವಂತ್ತಿಲ್ಲ. ಆದರೆ, ಕಡೂರು ತಾಲೂಕಿನಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸಲಾಗಿದ್ದು, ಇಲ್ಲಿಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಹಣವನ್ನು ಭರಿಸಲು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಳೆದ ಬಾರಿ ಮುಂಗಾರು ಮಳೆ ವಾಡಿಕೆಯಷ್ಟು ಬಾರದೆ ಇರುವುದರಿಂದ ರೈತರು ಬೆಳೆದ ಬೆಳೆಗಳು ಹಾಳಾಗಿದ್ದು, ಸರ್ಕಾರ ಅಂತಹ ರೈತರಿಗೆ ಪರಿಹಾರ ನೀಡಲು ಜಿಲ್ಲೆಗೆ 54 ಲಕ್ಷ ಇನ್‌ಫುಟ್ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.