ಪರಿಸರ ಜಾಗೃತಿಗೆ ವೃತ್ತಗಳಲ್ಲಿ ನೃತ್ಯ
ಶಿವಮೊಗ್ಗ: ಪರಿಸರ ಜಾಗೃತಿಗಾಗಿ ಸಾಮಾಜಿಕ ಕಳಕಳಿಯುಳ್ಳ ಸಂಘ ಸಂಸ್ಥೆಗಳು ವಿವಿಧ ಪ್ರಯತ್ನ ಮಾಡುವುದುಂಟು. ಹಾಗೆಯೇ ದಿ ಸ್ಟೆಪ್ ಹೋಲ್ಡರ್ಸ್ ಡ್ಯಾನ್ಸ್ ಅಸೋಸಿಯೇಷನ್ ಮೇ 3ರಂದು ಅನಾವರಣ ಎಂಬ ವಿಶಿಷ್ಟ ಪರಿಸರ ಜಾಗೃತಿ ಕಾರ್ಯಕ್ರಮ ಆಯೋಜಿಸಿದೆ.
ಕನ್ನಡಪ್ರಭ ಹಾಗೂ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳ ಮಾಧ್ಯಮ ಸಹಯೋಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಶನಿವಾರ ಸಂಜೆ 4 ಗಂಟೆಯಿಂದ 6.30ರವರೆಗೆ ನಗರದ ವಿವಿಧ ವೃತ್ತಗಳಲ್ಲಿ ನಡೆಯುವುದು. ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂಬುದು ಸ್ಟೆಪ್ ಹೋಲ್ಡರ್ಸ್ ತಂಡದ ಮುಂದಾಳು ಅರುಣ್ ರಾಜ್ ಶೆಟ್ಟಿ ಅಭಿಪ್ರಾಯ.
ಕಾರ್ಯಕ್ರಮ ವಿವರ: ಸಂಸ್ಥೆಯು ನಡೆಸಿದ ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದ ಮಕ್ಕಳು ಈ ಜಾಗೃತಿ ಕಾರ್ಯಕ್ರಮದಲ್ಲಿ ನೃತ್ಯ ಮಾಡಲಿದ್ದಾರೆ. ನೃತ್ಯ ಸಂಯೋಜನೆಯನ್ನು ಪರಿಸರ ಜಾಗೃತಿಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಪರಿಸರದ ಬಗ್ಗೆ ಜನರನ್ನು ಸೆಳೆಯಲು ಯಶಸ್ವಿಯಾಗುತ್ತೇವೆಂಬ ವಿಶ್ವಾಸವಿದೆ ಎಂದು ಅರುಣ್ ತಿಳಿಸುತ್ತಾರೆ. ಪ್ರಮುಖವಾಗಿ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತ, ವಿನೋಬ ನಗರ ವೃತ್ತ, ವೀರ ಶಿವಮೂರ್ತಿ ವೃತ್ತ, ಲಕ್ಷ್ಮೀ ಚಿತ್ರಮಂದಿರ, ಪೊಲೀಸ್ ಚೌಕಿ ಸೇರಿದಂತೆ ನಗರದ ಪ್ರಮುಖ ವೃತ್ತದಲ್ಲಿ ಈ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ.
ಶಿವಮೊಗ್ಗದ ಗೋಪಾಳ, ಪೊಲೀಸ್ ಚೌಕಿ, ಎಲ್ಬಿಎಸ್ ನಗರ, ಸೇರಿದಂತೆ ನಾಲ್ಕೈದು ಹಳ್ಳಿ, ಹೊನ್ನಾಳಿಯಲ್ಲಿ ಸಂಸ್ಥೆಯು ಮಕ್ಕಳಿಗೆ ಡ್ಯಾನ್ಸ್ ತರಬೇತಿ ನಡೆಸಿತ್ತು. ಇಲ್ಲಿ ಪಾಲ್ಗೊಂಡ 270 ಮಕ್ಕಳು ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

