ಪ್ರಜಾಪ್ರಭುತ್ವ ವ್ಯವಸ್ಥೆ ಅಂಬೇಡ್ಕರ್ ಹೋರಾಟದ ಫಲ
ಕ.ಪ್ರ.ವಾರ್ತೆ ಚಿಕ್ಕಮಗಳೂರು ಮೇ 2
ಬಹುಸಂಖ್ಯಾಂತ ಸಮುದಾಯ ಚುನಾವಣೆಯಲ್ಲಿ ಆಸೆಆಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳದೇ ಸ್ವಾಭಿಮಾನದಿಂದ ಬದುಕಬೇಕು ಎಂದು ಬಿಎಸ್ಪಿ ಮುಖಂಡ ಕೆ.ಟಿ. ರಾಧಾಕೃಷ್ಣ ಹೇಳಿದ್ದಾರೆ.
ತಾಲೂಕಿನ ಚಂಡಗೋಡು ಗ್ರಾಮದಲ್ಲಿ ಭೀಮಶಕ್ತಿ ಯುವಕ ಸಂಘ ಇತ್ತಿಚೇಗೆ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 123ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದಿನಿಂದಲೂ ಜನಜೀವನದಲ್ಲಿ ಹಾಸುಹೊಕ್ಕಾಗಿರುವ ಮೂಢನಂಬಿಕೆ, ಕಂದಾಚಾರ, ಗೊಡ್ಡು ಸಂಪ್ರದಾಯಗಳನ್ನು ಧಿಕ್ಕರಿಸಿ ವಿದ್ಯಾವಂತರಾಗಬೇಕು. ಈ ಮೂಲಕ ಬಹುಸಂಖ್ಯಾತರೆಲ್ಲಾ ಸಂಘಟಿತರಾಗಿ ಅಂಬೇಡ್ಕರ್ ನೀಡಿರುವ ಮತದಾನ ಎಂಬ ಅಸ್ತ್ರವನ್ನು ಸಮರ್ಥವಾಗಿ ಬಳಸಿ, ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ದೃಷ್ಟಿ ಕೇಂದ್ರೀಕರಿಸಬೇಕು ಎಂದು ಕರೆ ನೀಡಿದರು.
ಸಮಾಜ ಪರಿವರ್ತನ ಚಳವಳಿಯ ಜಯರಾಂ ಮಾತನಾಡಿ, ಅಂಬೇಡ್ಕರ್ ಸಂವಿಧಾನಶಿಲ್ಪಿ ಅಷ್ಟೇ ಅಲ್ಲ, ಭಾರತ ಪ್ರಜಾಪ್ರಭುತ್ವದ ಪಿತಾಮಹ. ಅವರ ತತ್ವ, ಆದರ್ಶಗಳನ್ನು ಪಾಲಿಸದೇ ಕೇವಲ ಜನ್ಮದಿನ ಆಚರಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
ಬಿಎಸ್ಪಿ ಮುಖಂಡ ಸಿ.ಎಸ್. ಮುದ್ದಣ್ಣ ಮಾತನಾಡಿ, ಚಂಡಗೋಡು ಭೂ ಹೋರಾಟದ ಮುಂದೆ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿ ನೆಲೆಯೂರಲು ಭದ್ರ ಬುನಾದಿ ಹಾಕಿಕೊಟ್ಟಿತು ಎಂದು ನೆನಪಿಸಿದರು.
ಭೀಮಶಕ್ತಿ ಯುವಕ ಸಂಘದ ಅಧ್ಯಕ್ಷ ಸಿ.ಬಿ.ರವಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್ಪಿ. ಕಚೇರಿ ಕಾರ್ಯದರ್ಶಿ ಕೆ.ಆರ್. ಗಂಗಾಧರ್, ತಾಲೂಕು ಕಾರ್ಯದರ್ಶಿ ಸಿ.ಪಿ.ವಸಂತ್ ಕುಮಾರ್, ಸಂಘದ ಪದಾಧಿಕಾರಿಗಳಾದ ಸಿ.ಇ. ನಾರಾಯಣ, ಸಿ.ಇ.ರಮೇಶ್, ಸಿ.ಎಂ.ಗೋಪಾಲ, ಅನಿತಾ ಚಂದ್ರಶೇಖರ್, ಅಣ್ಣಪ್ಪ, ಚೆನ್ನಯ್ಯ, ಪುಟ್ಟರಾಜು, ಸಿ.ಇ. ಮಹೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭರತ್ ಸ್ವಾಗತಿಸಿ, ಸತೀಶ್ ನಿರೂಪಿಸಿ, ಉಮೇಶ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

