ಚಿಕ್ಕಮಗಳೂರು

ಸಾಮಾಜಿಕ ಸಮಸ್ಯೆ ನಿವಾರಣೆಗೆ ಶ್ರಮಿಸಿ

Published On :

ಬಸವಣ್ಣನವರ ಆದರ್ಶ ಇಡೀ ಪ್ರಪಂಚಕ್ಕೇ ಆದರ್ಶ: ಡಿಸಿ ಶೇಖರಪ್ಪ


ಕ.ಪ್ರ. ವಾರ್ತೆ, ಚಿಕ್ಕಮಗಳೂರು, ಮೇ 2
ಜಗಜ್ಯೋತಿ ಬಸವಣ್ಣ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಹೇಳಿದರು.
ವಾರ್ತಾ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸಮಾಜದಲ್ಲಿರುವ ಸಾಮಾಜಿಕ ಸಮಸ್ಯೆಯನ್ನು ತೊಲಗಿಸಲು ಎಲ್ಲರೂ ಶ್ರಮಿಸಬೇಕು, ಬಸವಣ್ಣ ಅವರ ಸಾಮಾಜಿಕ ಕ್ರಾಂತಿಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ರಕ್ಷಣಾಧಿಕಾರಿ ಆರ್.ಚೇತನ್ ಮಾತನಾಡಿ, 12ನೇ ಶತಮಾನವು ಮಹತ್ವವಾದ ಕಾಲಘಟ್ಟ. ಬಸವಣ್ಣನವರ ಆದರ್ಶ ಇಡೀ ವಿಶ್ವಕ್ಕೆ ದಾರಿದೀಪ. ಅವರು ಹಾಕಿಕೊಟ್ಟ ಮಾರ್ಗದರ್ಶನದಿಂದ ಕರ್ನಾಟಕ ರಾಜ್ಯ ಇತರೆ ರಾಜ್ಯಗಳಿಗಿಂತ ವಿಶಿಷ್ಟವಾಗಿ ಕಾಣುತ್ತಿದೆ ಎಂದರು.
ಜಾತಿ, ಭೇದ, ಗಂಡು, ಹೆಣ್ಣು ಎಂಬ ಯಾವುದೇ ತಾರತಮ್ಯ ಇಲ್ಲದೆ ಅವರು ಮಾನವ ಧರ್ಮವನ್ನು ಸಾರಿ ವಿಶ್ವ ಗುರುವಾಗಿದ್ದಾರೆ. ಅವರ ಆದರ್ಶಗಳನ್ನು ನಾವೆಲ್ಲೂ ಪಾಲಿಸೋಣ. ಇಂತಹ ಕಾರ್ಯಕ್ರಮಗಳು ನಾಮ್ ಕೇ ವಾಸ್ತೆ ಎಂಬಂತಾಗಬಾರದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅರ್ಚನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಎಂ. ಪಾಟೀಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ, ವಾರ್ತಾಧಿಕಾರಿ ಬಿ.ಮಂಜುನಾಥ್, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸುಧೀರ್ ಮತ್ತು ಅಕ್ಕಮಹಾದೇವಿ ಮಹಿಳಾ ತಂಡದವರಿಂದ ವಚನ ಗಾಯನ ನಡೆಯಿತು. ಶ್ರೀನಿವಾಸ್ ಸ್ವಾಗತಿಸಿ, ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.