ತರೀಕೆರೆಯಲ್ಲಿ ವಿಶೇಷ ಉಪನ್ಯಾಸ
ತರೀಕೆರೆ: ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಶಂಕರ ಜಯಂತಿ ಅಂಗವಾಗಿ ವಿಶೇಷ ಉಪನ್ಯಾಸ ಮತ್ತು ಸೌಂದರ್ಯ ಲಹರಿ ಪಾರಾಯಣ ಏರ್ಪಡಿಸಲಾಗಿತ್ತು. ಮಾತಾ ಗಾಯಿತ್ರಿ ಪ್ರತಿಷ್ಠಾನ ಅಧ್ಯಕ್ಷರಾದ ಕೆ.ಟಿ. ಲಕ್ಷ್ಮೀನಾರಾಯಣ ಭಟ್ ಅವರು ಪ್ರವಚನ ನೀಡಿ, ಶಂಕರ ಭಗವತ್ಪಾದಾಚಾರ್ಯರು ಸನಾತನ ಹಿಂದು ಧರ್ಮ ರಕ್ಷಣೆಯಲ್ಲಿ ಸಾಕ್ಷಾತ್ ಪರಮೇಶ್ವರನೇ ಶಂಕರನಾಗಿ ಅವತರಿಸಿ ಎಲ್ಲರಿಗೂ ಮಾರ್ಗದರ್ಶನ ನೀಡಿದರು ಎಂದರು. ಪ.ಪೂ. ಕಾಲೇಜು ನಿವೃತ್ತ ಉಪನ್ಯಾಸಕ ಬಿ.ಎಚ್. ಕುಮಾರಸ್ವಾಮಿ ಅವರು ಶಂಕರರು ಮತ್ತು ಮಂಡನಮಿಶ್ರರ ನಡುವೆ ನಡೆದ ಶ್ರೇಷ್ಠ ಧಾರ್ಮಿಕ ಸಂವಾದವನ್ನು ವಿವರಿಸಿದರು. ಶ್ರೀವತ್ಸ ಭಜನಾ ಮಂಡಳಿ ಸದಸ್ಯೆಯರಿಂದ ಸೌಂದರ್ಯ ಲಹರಿ ಪಾರಾಯಣ ಏರ್ಪಡಿಸಲಾಗಿತ್ತು. ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಎ.ವಿ.ನಾಗಭೂಷಣ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರ ಸ್ಥಳಾಂತರ ಕೌನ್ಸೆಲಿಂಗ್
ಚಿಕ್ಕಮಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹೆಚ್ಚುವರಿ ಶಿಕ್ಷಕರ ಹುದ್ದೆಗಳನ್ನು ಸ್ಥಳಾಂತರಗೊಳಿಸಲು ಇಲಾಖೆಯ ಆಯುಕ್ತರು ಆದೇಶಿಸಿದ್ದು, ಅದರಂತೆ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಥಳಾಂತರ ಕೌನ್ಸೆಲಿಂಗ್ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಜಪ್ಪ ತಿಳಿಸಿದ್ದಾರೆ. ಹೆಚ್ಚುವರಿ ಖಾಲಿ ಹುದ್ದೆ ಮತ್ತು ಶಿಕ್ಷಕರ ಹುದ್ದೆಗಳ ಪಟ್ಟಿಯನ್ನು ಶನಿವಾರದಂದು ಆಯಾಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಮೇ 8 ಕೊನೆಯ ದಿನ. ಮೇ 9ರಂದು ಅಂತಿಮ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಮೇ 13ರಂದು ತಾಲೂಕಿನ ಒಳಗೆ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸೆಲಿಂಗ್ ನಡೆಯಲಿದೆ. ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಕೌನ್ಸೆಲಿಂಗ್ ಮೇ 14 ರಂದು, ಜಿಲ್ಲಾ ಹಂತದ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸೆಲಿಂಗ್ ಮೇ 15 ರಂದು ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

