ಚಿಕ್ಕಮಗಳೂರು

'ಜಯಪ್ರಕಾಶ್ ಹೆಗ್ಡೆ ಗೆಲವು ನಿಶ್ಚಿತ'

Published On :

ಕಡೂರು: ಚಿಕ್ಕಮಗಳೂರು- ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ಪಿ. ಉಮೇಶ್, ನಿಡಘಟ್ಟ ಗ್ರಾಪಂ ಸದಸ್ಯ ಎನ್. ನಾಗರಾಜ್, ಜಯಪ್ರಕಾಶ್ ಹೆಗ್ಡೆಯವರು ತಮಗೆ ಸಿಕ್ಕ 18 ತಿಂಗಳ ಅಲ್ಪ ಅವಧಿಯಲ್ಲೇ ಜನಪರ ಕೆಲಸ ಮಾಡುವ ಉತ್ತಮ ಸಂಸದರಾಗಿದ್ದಾರೆ. ಯಾವ ಆರೋಪ ಇಲ್ಲದೆ ಉತ್ತಮ ಕೆಲಸ ಮಾಡಿರುವುದರಿಂದ ಜನರು ಅವರಿಗೆ ಮತ ನೀಡಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನಿಡಘಟ್ಟ ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಎಸ್. ನಂಜುಂಡಪ್ಪ, ಸದಸ್ಯ ಎನ್.ಪಿ. ಸೋಮೇಶ್, ಕುಮಾರಶೆಟ್ಟಿ, ಎನ್.ಕೆ. ಶ್ರೀಧರ್, ಸಿ.ಬಿ. ಮಂಜುನಾಥ್, ಎನ್. ಕೃಷ್ಣಮೂರ್ತಿ ಮತ್ತಿತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.