ರೈತ ವಿರೋಧಿ ನೀತಿಯಿಂದ ಸಂಕಷ್ಟದಲ್ಲಿ ಕೃಷಿಕರು
ಚಿಕ್ಕಮಗಳೂರು: ಜಾಗತೀಕರಣ ಮತ್ತು ಸರ್ಕಾರಗಳ ರೈತ ವಿರೋಧಿ ನೀತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ಕೆ. ಕೃಷ್ಣೇಗೌಡ ಹೇಳಿದ್ದಾರೆ.
ತಾಲೂಕಿನ ಕರ್ತಿಕೆರೆ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಜನವಿರೋಧಿ ನೀತಿಯಿಂದಾಗಿ ರೈತರು ಆತ್ಮಹತ್ಯೆಯಂಥ ಹಾದಿ ಹಿಡಿದಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿಗಳಿಂದ ಕಂಗಾಲಾದ ರೈತರಿಗೆ ವೈಜ್ಞಾನಿಕ ಪರಿಹಾರ ದೊರಕುತ್ತಿಲ್ಲ, ವೈಜ್ಞಾನಿಕ ಬೆಲೆ ನೀತಿಯ ಬಗ್ಗೆ ಜನಪ್ರತಿನಿಧಿಗಳು ಚಕಾರ ಎತ್ತುತ್ತಿಲ್ಲ ಎಂದರು.
ಯುವಕರು, ಉದ್ಯೋಗವಿಲ್ಲದೆ ಕೃಷಿ ತೊರೆದು ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಹಳ್ಳಿಗಳು ವೃದ್ಧಾಶ್ರಮವಾಗಿ ಮಾರ್ಪಾಡಾಗಿವೆ. ಮುಂದಿನ ದಿನಗಳಲ್ಲಿ ಕೃಷಿಯ ನಿರ್ಲಕ್ಷ್ಯದ ಪರಿಣಾಮವನ್ನು ಸರ್ಕಾರ ಮತ್ತು ಜನತೆ ಎದುರಿಸಬೇಕಾಗುತ್ತದೆ. ಆಹಾರ ಪದಾರ್ಥಗಳ ಅಭಾವದಿಂದ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ಮುಂದಿನ ದಿನಗಳಲ್ಲಿ ಉಂಟಾಗಲಿದ್ದು, ಸರ್ಕಾರಗಳು ರೈತರ ಪರವಾಗಿ ನಿಲ್ಲಬೇಕಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರಗಳ ರೈತ ವಿರೋಧಿ ಧೋರಣೆಗಳನ್ನು ಸಂಘಟಿತರಾಗಿ ಎದುರಿಸಬೇಕಾಗಿದೆ. ಆದ್ದರಿಂದ ರೈತರು ಸಂಘಟಿತರಾಗುವುದು ಅನಿವಾರ್ಯ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಎಂ. ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ರಮೇಶ್, ಜಿಲ್ಲಾ ಉಪಾಧ್ಯಕ್ಷ ಎಂ.ಸಿ. ಬಸವರಾಜ್, ಕೆ.ಪಿ. ಚಂದ್ರೇಗೌಡ, ಕೆ.ಎಚ್. ಚಂದ್ರೇಗೌಡ, ಟಿ.ಎ. ಮಂಜುನಾಥ್, ಪುಟ್ಟಸ್ವಾಮಿಗೌಡ, ಚಂದ್ರಶೇಖರ್ ಹಾಗೂ ಉದ್ದೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

