ಚಿಕ್ಕಮಗಳೂರು

ಕನ್ನಡ ಸಾಹಿತ್ಯ ಪರಿಷತ್‌ನಿಂದ ಭಾಷಾ ಜಾಗೃತಿ

Published On :

ಕ.ಪ್ರ.ವಾರ್ತೆ, ಬೀರೂರು, ಮೇ 6
ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿ 100 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ತಾಲೂಕು ಸಾಹಿತ್ಯ ಪರಿಷತ್ ಹಾಗೂ ರೋಟರಿ ಕ್ಲಬ್ ವತಿಯಿಂದ ಇಲ್ಲಿನ ಮಾರ್ಗದ ಮಲ್ಲಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ಶತಸಂಭ್ರಮ ಕಾರ್ಯಕ್ರಮ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ರೋಟರಿ ಅಧ್ಯಕ್ಷ ಗೋಪಾಲಕೃಷ್ಣ ಗುಪ್ತ, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ನಾಡು, ನುಡಿ ಹಾಗೂ ಭಾಷಿಕರಲ್ಲಿ ಜಾಗೃತಿ ಮೂಡಿಸಿರುವ ಜೊತೆಗೆ ಕನ್ನಡ ಸಾಹಿತ್ಯ ಸಿರಿಯನ್ನು ಪ್ರಕಟಗೊಳಿಸುವ ಮೂಲಕ ಸಾಹಿತ್ಯಸಕ್ತರನ್ನು, ಸಾಹಿತಿಗಳನ್ನು ಗೌರವಿಸಿಕೊಂಡು ತನ್ನದೇ ಅಭಿಲಾಷೆಯೊಂದಿಗೆ ಉತ್ತಮ ಕಾರ್ಯ ನಿರ್ವಹಿಸಿಕೊಂಡು ಬಂದಿದೆ ಎಂಬುದನ್ನು ನೆನಪಿಸಿದರು.
ಆಶಯ ನುಡಿಗಳನ್ನಾಡಿದ ಸಾಹಿತಿ ವಸೂರು ಪುಟ್ಟರಾಜು, ಬೆಂಗಳೂರಿನಲ್ಲಿ ಸ್ಥಾಪನೆಗೊಂಡು ಎಚ್.ವಿ. ನಂಜುಂಡಯ್ಯನವರ ಅಧ್ಯಕ್ಷತೆಯಿಂದ ಆರಂಭವಾಗಿ ಬಾಡಿಗೆ ಕಟ್ಟಡದಲ್ಲಿ ಕನ್ನಡ ಪರ ಚಟುವಟಿಕೆ  ನಡೆಸೊಕಂಡು ಬಂದಿದೆ ಎಂದರು.
ಪ್ರಧಾನ ಉಪನ್ಯಾಸ ನೀಡಿದ ಸಾಹಿತಿ ಸಿಂಗಟಗೆರೆ ಸಿದ್ದಪ್ಪ, ಪರಿಷತ್ತು ನಡೆದು ಬಂದ ಬಗ್ಗೆ ಸ್ವವಿವರ ಮಾಹಿತಿ ನೀಡಿ, ತಾಯಿ ಮಾತೃ ಭೂಮಿ, ಮಾತೃಭಾಷೆ, ಇವೆಲ್ಲವೂ ಶ್ರೇಷ್ಠ. ಧಾರವಾಡದಲ್ಲಿ ವಿದ್ಯಾವರ್ಧಕ ಸಂಘ ಮೈಸೂರಿನಲ್ಲಿ ಸರ್.ಎಂ. ವಿಶ್ವೇಶ್ವರಯ್ಯನವರ ಕಾಳಜಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಸಹಕಾರದಿಂದ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ 80 ಜನ ಪರಿಷತ್ತು ಅಧ್ಯಕ್ಷರಾಗಿ ಕನ್ನಡದ ರಥವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ ಎಂದರು.
ಹಿರಿಯ ಸದಸ್ಯ ಟಿ. ಹನುಮಂತಪ್ಪ ಮಾತನಾಡಿ, ತಮ್ಮ ಕನ್ನಡ ಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಗ್ಗೆ, ಹಾಗೆಯೇ ಭಾಷಾ ಜಾಗೃತಿ ಬಗ್ಗೆ ವಹಿಸಬೇಕಾದ ಕಾಳಜಿ ಕುರಿತು ಅಭಿಪ್ರಾಯ ಹಂಚಿಕೊಂಡರು.  ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆಯನ್ನು ಪ್ರೀತಿಸಿದರೆ ಅದು ನಮ್ಮನ್ನು ಬೆಳೆಸುತ್ತದೆ ಎಂದರು.
ಹೋಬಳಿ ಕಸಾಪ ಅಧ್ಯಕ್ಷ ಕುಮಾರಸ್ವಾಮಿ, ಗಂಗಾಧರಪ್ಪ, ಇನ್ನರ್‌ವೀಲ್ ಅಧ್ಯಕ್ಷೆ ಪ್ರೇಮಾ ಬಸವರಾಜ್ ಉಪಸ್ಥಿತರಿದ್ದರು. ಶೃತಿ ನಿಂಗರಾಜು ಪ್ರಾರ್ಥಿಸಿದರು. ಕುಮಾರಸ್ವಾಮಿ ಸ್ವಾಗತಿಸಿದರು. ಸಂಪತ್ ಕುಮಾರ್  ನಿರೂಪಿಸಿದರು. ಗಂಗಾಧರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.