ಚಿಕ್ಕಮಗಳೂರು

ಹೆಚ್ಚುತ್ತಿರುವ ರಾಸುಗಳ ಕಳವು: ಗ್ರಾಮಸ್ಥರ ಆರೋಪ

Published On :

ಬೀರೂರು: ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೊಟ್ಟಿಗೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಬೆಲೆಬಾಳುವ ರಾಸುಗಳ ಕಳ್ಳತನ ಹೆಚ್ಚಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ನೀಡಿದರೂ  ಪ್ರಯೋಜನವಾಗುತ್ತಿಲ್ಲ ಎಂದು ಕಡೂರು ಹಾಗೂ ಬೀರೂರು ಪಟ್ಟಣದ ಸುತ್ತಮುತ್ತವಿರುವ ಬಳ್ಳಿಗನೂರು, ಹೂವಿನಹಳ್ಳಿ, ಆಲದಹಳ್ಳಿ. ದೇವರಹಳ್ಳಿ ಸೇರಿದಂತೆ ಹಲವು ಗ್ರಾಮಸ್ಥರು ದೂರಿದ್ದಾರೆ.
ಕೆಲವರು ಕಸಾಯಿಖಾನೆಯೊಂದಿಗೆ ಶಾಮೀಲಾಗಿ ಈ ಕೃತ್ಯ ನಡೆಸುತ್ತಿದ್ದು, ರಾಸುಗಳ ಕಳ್ಳ ಮಾರಾಟ ನಡೆಯುತ್ತಿದೆ. ಮಧ್ಯರಾತ್ರಿಯ ವೇಳೆ ಈ ಕಳ್ಳತನ ನಡೆಯುತ್ತಿದೆ.
ಇಲ್ಲಿಯವರೆಗಿನ ಎಲ್ಲಾ ಹಸುಗಳು ಈ ವೇಳೆಯಲ್ಲಿಯೆ ಕಳ್ಳತನವಾಗುತ್ತಿರುವುದು ಕಂಡು ಬಂದಿದ್ದು, ಕಳ್ಳತನವಾಗುತ್ತಿರುವ ಬಗ್ಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ ಹಾಗೂ ಸುಳಿವು ಸಿಗುತ್ತಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಧ್ಯರಾತ್ರಿಯ ವೇಳೆ ಲಾರಿಗಳಲ್ಲಿ, ಸಣ್ಣ ಕ್ಯಾಬ್‌ಗಳಲ್ಲಿ ದನಗಳನ್ನು ತುಂಬಿಕೊಂಡು ಹೋಗಿ ಮಾರಾಟ ಮಾಡುತ್ತಿರುವ ಶಂಕೆ ವ್ಯಕ್ತವಾಗಿದ್ದು, ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ರೈತರ ಸಂಕಷ್ಟ ದೂರ ಮಾಡಬೇಕೆಂದು ಕೋರಿದ್ದಾರೆ.
ಜಿಲ್ಲಾಡಳಿತ ಹೆಚ್ಚಿನ ಗಮನಹರಿಸಿ ಈ ಬಗ್ಗೆ ಸೂಕ್ತ ಜಾಗೃತಿ ವಹಿಸಬೇಕು ಹಾಗೂ ಅಕ್ರಮವಾಗಿ ಮಾರಾಟವಾಗುತ್ತಿರುವ ಗೋವಿನ ಮಾರಾಟ ನಿಲ್ಲಿಸುವಲ್ಲಿ ಗಮನಹರಿಸಿ ಕಳ್ಳ ಸಾಗಾಣೆಕೆ ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು, ಪೊಲೀಸರು ಬಗ್ಗೆ ಹೆಚ್ಚಿನ ಗಮನ ಹರಿಸಿ ರೈತರ ಹಿತ ಕಾಪಾಡದಿದ್ದರೆ ಅವರನ್ನು ರಕ್ಷಿಸುವವರು ಯಾರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಾಲೂಕಿನಲ್ಲಿ ನಡೆಯುತ್ತಿರುವ ಈ ಅಕ್ರಮ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಹೆಚ್ಚಿನ ಆದೇಶ ನೀಡಿ ತಮ್ಮ ಕ್ರಮ ಕೈಗೊಂಡು ರೈತರ ಹಿತ ಕಾಯಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹೇಶ್ ಒಡೆಯರ್ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.