ಚಿಕ್ಕಮಗಳೂರು

ಚೋರ್ ಭಾಗ್ಯ ಯೋಜನೆಯಡಿ ಕಬೀರ್ ಕುಟುಂಬಕ್ಕೆ ಪರಿಹಾರ: ಸುನೀಲ್‌ಕುಮಾರ್

Published On :

ಚಿಕ್ಕಮಗಳೂರು: ಅಕ್ರಮವಾಗಿ ಗೋ ಸಾಗಾಣಿಕೆ ಮಾಡಿದ ಕಬೀರ್ ಅವರ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡುವ ಮೂಲಕ ರಾಜ್ಯ ಸರ್ಕಾರ ಚೋರ್ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಕಾರ್ಕಳ ಶಾಸಕ ವಿ. ಸುನೀಲ್‌ಕುಮಾರ್ ಆರೋಪಿಸಿದ್ದಾರೆ.
ಕಬೀರ್ ಹತ್ಯೆಯ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಎ.ಎನ್.ಎಫ್. ಪೇದೆ ನವೀನ್ ನಾಯಕ್ ಅವರ ಪತ್ನಿಯವರಿಗೆ ಮಂಗಳವಾರ ನ್ಯಾಯಾಲಯದ ಖರ್ಚು ಮತ್ತು ಜಮೀನು ಪಡೆಯಲು 50 ಸಾವಿರ ನೀಡಿದ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಕಬೀರ್ ಅವರನ್ನು ಹತ್ಯೆ ಮಾಡಿರುವ ಎಎನ್‌ಎಫ್ ಸಿಬ್ಬಂದಿ ನವೀನ್ ನಾಯಕ್ ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸುವ ಮೂಲಕ ರಾಜ್ಯ ಸರ್ಕಾರ ಪೊಲೀಸರ ಆತ್ಮಸ್ಥೈರ್ಯವನ್ನು ಕುಗ್ಗಿಸಿದೆ. ಇದು, ಖಂಡನೀಯ. ಅಕ್ರಮವಾಗಿ ಗೋ ಸಾಗಾಣಿಕೆ ಮಾಡುವ ವೇಳೆಯಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರಿಗೆ 10 ಲಕ್ಷ ಪರಿಹಾರ ನೀಡಿರುವುದು, ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ. ಇದು, ದುರಂತ ಹಾಗೂ ಬೇಸರದ ಸಂಗತಿ ಎಂದು ಹೇಳಿದರು.
ಪೊಲೀಸರ ಗುಂಡಿಗೆ ಬಲಿಯಾದ ಕಬೀರ್ ಅವರ ಕುಟುಂಬದವರನ್ನು ಭೇಟಿ ಮಾಡುವ ಪ್ರಯತ್ನ ಸರ್ಕಾರದ ಪ್ರತಿನಿಧಿಗಳು ಮಾಡಿದ್ದಾರೆ. ಅಕ್ರಮ ಗೋಸಾಗಾಣಿಕೆದಾರರನ್ನು ಗುಂಡಿಕ್ಕಿರುವ ಎಎನ್‌ಎಫ್ ಸಿಬ್ಬಂದಿಯನ್ನು ಭೇಟಿ ಮಾಡುವ ಕೆಲಸ ಸರ್ಕಾರ ಈವರೆಗೆ ಮಾಡಿಲ್ಲ, ಸರ್ಕಾರದ ತಪ್ಪು ನಿರ್ಧಾರದಿಂದಾಗಿ ಎಎನ್‌ಎಫ್ ಸಿಬ್ಬಂದಿ ಬೇಸರಗೊಂಡಿದ್ದಾರೆ ಎಂದರು.
ಆರೋಪ ಮುಕ್ತಗೊಳಿಸಿ: ನ್ಯಾಯಾಂಗ ಬಂಧನದಲ್ಲಿರುವ ನವೀನ್ ನಾಯಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕೂಡಲೇ ಬಿ ರಿಪೋಟ್ ಹಾಕಬೇಕು. ಅವರಿಗೆ ನ್ಯಾಯಾಲಯದಲ್ಲಿ ಬೇಲ್ ಸಿಗುವ ರೀತಿಯಲ್ಲಿ ಸಹಕರಿಸಿ ಅವರನ್ನು ಆರೋಪದಿಂದ ಮುಕ್ತಗೊಳಿಸಬೇಕು ಎಂದು ಹೇಳಿದರು.
ಕಾರ್ಕಳದಲ್ಲಿ ಸುಮಾರು 2 ಕೋಟಿಯಷ್ಟು ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಈ ಸಂಬಂಧ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದ್ದು, ಆತನಿಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸರ್ಕಾರ ಹಿಂದೆ ಮುಂದೆ ಯೋಚನೆ ಮಾಡುತ್ತಿದೆ.
ಸರ್ಕಾರ ಒತ್ತಡಕ್ಕೆ ಮಣಿಯದೆ ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.