ಚಿಕ್ಕಮಗಳೂರು

ವಾಹನ ತಪಾಸಣೆ

Published On :

ಮೂಡಿಗೆರೆ: ವಾಹನ ಸಂಚಾರ ಸುರಕ್ಷತೆ ದೃಷ್ಟಿಯಿಂದ ಬುಧವಾರ ಪಟ್ಟಣದ ಮೇಗಲಪೇಟೆ ಬಳಿ ಪೊಲೀಸರು ವಾಹನಗಳ ತಪಾಸಣೆ ನಡೆಸಿದರು. ಕೆಲವು ದ್ವಿಚಕ್ರ ವಾಹನಗಳ ಸವಾರರು ದಾಖಲೆಗಳಿಲ್ಲದೇ ಪೊಲೀಸರು ತಡೆದು ನಿಲ್ಲಿಸುವಾಗ ಕಕ್ಕಾಬಿಕ್ಕಿಯಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಬಹುತೇಕ  ಮಹಿಳೆಯರ ಬಳಿ ಚಾಲನಾ ಪರವಾನಗಿ ಇಲ್ಲದಿರುವುದು ಕಂಡು ಬಂದವು.
ದಾಖಲೆಗಳು ಇಲ್ಲದಿರುವ ವಾಹನಗಳಿಗೆ ನಿಗದಿತ ನಮೂನೆಯಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಯಿತು. ರಸ್ತೆಯಲ್ಲಿ ತಪಾಷನೆ ನಡೆಸುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ಬಹಳಷ್ಟು ವಾಹನಗಳ ಸವಾರರು ಬೇರೆ ದಾರಿಯಲ್ಲಿ ಪ್ರಯಾಣಿಸಿದರು.   ತಪಾಸಣಾ ಕಾರ್ಯದಲ್ಲಿ ನಿರೀಕ್ಷಕ ಹಹಿರೇಮಠ ನೇತೃತ್ವದಲ್ಲಿ ಸಿಬ್ಬಂದಿಗಳಾದ ಚಿಕ್ಕಮಗಳೂರಿನ ಎಂ.ಎಚ್.ಉಮಾಶಂಕರ್, ಕಲ್ಲೇಶ್ ನಾಯ್ಕ, ಮೂಡಿಗೆರೆ ಪೊಲೀಸ್ ಪೇದೆಗಳಾದ ದಾನೇಶ್, ಸುರೇಶ್ ಮತ್ತಿತರರು ಇದ್ದರು.
ದತ್ತ ಪೀಠ: ವಾಹನ ಸಂಚಾರ ನಿಷೇಧ
ಚಿಕ್ಕಮಗಳೂರು: ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹೋಗುವ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೇ 1 ರಿಂದ 31 ರವರೆಗೆ ಚಿಕ್ಕಮಗಳೂರು ತಾಲೂಕಿನ ಕೆಮ್ಮಣ್ಣುಗುಂಡಿ ಕ್ರಾಸ್‌ನಿಂದ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಹೋಗುವ ರಸ್ತೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನೂ ನಿರ್ಬಂಧಿಸಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ  ಅವರು ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.