ಚಿಕ್ಕಮಗಳೂರು

ಉತ್ತಮ ಪ್ರಜೆಯಿಂದ ದೇಶದ ಪ್ರಗತಿ

Published On :

ಕ.ಪ್ರ.ವಾರ್ತೆ, ಕಡೂರು, ಮೇ 8
ಕೇಂದ್ರ ಸರ್ಕಾರ 2000 ನೇ ಸಾಲಿನಲ್ಲಿ ಜಾರಿಗೆ ತಂದ ಬಾಲ ನ್ಯಾಯ ಕಾಯ್ದೆ ಹಾಗೂ  2006ರ ತಿದ್ದುಪಡಿ ಕಾಯ್ದೆ ಜಾರಿಯಿಂದ ಬಾಲಕಾರ್ಮಿಕ ಪದ್ಧತಿ, ಜೀತಪದ್ಧತಿ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಗಣನೀಯವಾಗಿ ಕಡಿಮೆಯಾಗಿವೆ ಎಂದು ಕಡೂರು ಜೆ.ಎಂ.ಎಫ್.ಸಿ ನ್ಯಾಯಾಧೀಶ  ಶ್ರೀನಿವಾಸಗೌಡ ಹೇಳಿದರು.  
ಅವರು ಕಡೂರು ತಾಪಂ ಸಭಾಂಗಣದಲ್ಲಿ ಮಕ್ಕಳ ಜಿಲ್ಲಾ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರ ಜೀವನ ವಿಧಾನ ಹಾಗೂ ಚಿಂತನೆ ವಿಧಾನ ಬದಲಾಗುತ್ತಿರುವುದರಿಂದ ಅನಿವಾರ್ಯ ಅಥವಾ ಸಾಂದರ್ಭಿಕವಾಗಿ ಮಕ್ಕಳು ಅಪರಾಧ ಎಸಗಿ ಪುನರ್ವಸತಿ ಕೇಂದ್ರದಿಂದ ಹೊರಬಂದ ಬಳಿಕ ಅವರಿಗೆ ಉತ್ತಮ ಜೀವನ ದೊರೆಯಬೇಕು ಮತ್ತು ಆ ಮೂಲಕ ಅವರು ಮತ್ತೆ ಕೆಟ್ಟ ಚಟುವಟಿಕೆಗಳಲ್ಲಿ ಭಾಗವಹಿಸಿ ಅಪರಾಧ ಎಸಗುವುದನ್ನು ತಪ್ಪಿಸುವುದು ಕಾಯಿದೆಯ ಧ್ಯೇಯ ಎಂದರು.
ಈ ಕಾಯ್ದೆ ಜಾರಿಗೆ ಬಂದ ಬಳಿಕ ಬಾಲ ಕಾರ್ಮಿಕ ಪದ್ಧತಿ ಮತ್ತು ಜೀತ ಪದ್ಧತಿ ಪ್ರಕರಣ ಗಣನೀಯವಾಗಿ ಕಡಿಮೆಯಾಗಿವೆ ಎಂದರು.
ಉತ್ತಮ ಪೋಷಣೆ: ಕಡೂರು, ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥಸ್ವಾಮಿ ಮತ್ತು ಮೋಹನ್ ಕುಮಾರ್ ಆಶಯ ಭಾಷಣ ಮಾಡಿ, ಮಕ್ಕಳಿಗೆ ಉತ್ತಮ ಪಾಲನೆ ಮತ್ತು ಪೋಷಣೆಯ ಅಗತ್ಯವಿದೆ ಎಂದರು.
ಪ್ರಾಸ್ತಾವಿಕವಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಂಗನಾಥ್ ಮಾತನಾಡಿದರು. ವಕೀಲ ಕೆ.ಎನ್. ಬೊಮ್ಮಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರಯ್ಯ, ಮಕ್ಕಳ ಕಲ್ಯಾಣ ಇಲಾಖೆಯ ಸಮಿತಿ ಸದಸ್ಯ ಹಾಗೂ ಸಿಡಿಪಿಒ ರಂಗನಾಥ್, ಮಕ್ಕಳ ಜಿಲ್ಲಾ ರಕ್ಷಣಾ ಘಟಕದ ಬಸವರಾಜ್ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.