ಕಾನೂನು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಕ್ರಮ
ಕ.ಪ್ರ.ವಾರ್ತೆ ್ಣ ಚಿಕ್ಕಮಗಳೂರು ್ಣ ಮೇ 8
ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಉನ್ನತ ಮಟ್ಟದ ಪಠ್ಯಕ್ರಮ ಅಳವಡಿಸುವುದರ ಜತೆಗೆ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ವಕೀಲರ ಪರಿಷತ್ತು ಉಪಾಧ್ಯಕ್ಷ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ.
ನಗರದ ಬಸವನಹಳ್ಳಿಯ ಕನ್ನಡ ಸೇನೆ ಕಚೇರಿಯಲ್ಲಿ ಜಿಲ್ಲಾ ಘಟಕ ಗುರುವಾರ ಹಮ್ಮಿಕೊಂಡಿದ್ದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಬಲವರ್ಧನೆಗೆ ಒತ್ತು: ದೇಶದ ಮಹಾನಗರಪಾಲಿಕೆ ಮತ್ತು ನಗರ ಪ್ರದೇಶದಲ್ಲಿರುವ ಕಾನೂನು ಕಾಲೇಜುಗಳ ಬಲವರ್ಧನೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈ ಬಗ್ಗೆ ಸಮಾಲೋಚನೆ ನಡೆಸಿ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬಾರ್ ಕೌನ್ಸಿಲ್ (ಎಲ್.ಇ.ಸಿ.) ಸಭೆಯಲ್ಲಿ ಪ್ರಸ್ತಾಪಿಸಿ, ಗ್ರಾಮಾಂತರ ಪ್ರದೇಶದಲ್ಲಿರುವ ದೇಶದ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿ ಸೌಕರ್ಯ ಒದಗಿಸಿ ಅನುಕೂಲ ಕಲ್ಪಿಸುವಂತೆ ಮುಖ್ಯ ಕಾರ್ಯದರ್ಶಿಗಳ ಮೂಲಕ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರಗಳು ವಿಫಲರಾಗಿರುವ ಮಾಹಿತಿ ಬಂದಿರುವ ಕಾರಣ ಈ ಕ್ರಮಕ್ಕೆ ಮುಂದಾಗಿದ್ದು, ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗದ ಕಾಲೇಜುಗಳ ಮಾಹಿತಿ ಕಲೆ ಹಾಕಿ ಅಂತಹವುಗಳನ್ನು ಮುಚ್ಚುವ ತೀರ್ಮಾನ ಕೈಗೊಳ್ಳಲು ಆಲೋಚಿಸಲಾಗಿದೆ ಎಂದು ಹೇಳಿದರು.
ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಪಿ.ಸಿ. ರಾಜೇಗೌಡ ಮಾತನಾಡಿ, ಮನುಷ್ಯ ಸ್ನೇಹಮಯಿ ವ್ಯಕ್ತಿತ್ವ, ನಾಯಕತ್ವದ ಗುಣ ಅಳವಡಿಸಿಕೊಂಡಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೇರಿ ಸಮಾಜದಲ್ಲಿ ಹೆಚ್ಚಿನ ಗೌರವ ಗಳಿಸಬಹುದು ಎಂದರು.
ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಜೊತೆ ಶಾಶ್ವತವಾಗಿ ಜನಮಾನಸದಲ್ಲಿ ಉಳಿಯುವ ಕೆಲಸ ಮಾಡಿದಾಗ ಸಾರ್ಥಕತೆ ಕಾಣಬಹುದು ಎಂದರು.
ವಕೀಲ ಎಸ್.ಎಸ್. ವೆಂಕಟೇಶ್, ನಗರಾಧ್ಯಕ್ಷ ಪ್ರವೀಣ್, ಜಿಲ್ಲಾ ಉಪಾಧ್ಯಕ್ಷ ದೇವರಾಜ್, ಮುಖಂಡ ಮಂಜೇಗೌಡ, ಕುಪ್ಪೇನಹಳ್ಳಿರಾಜು, ನೀಲೇಶ್, ಕೃಷ್ಣಪ್ಪ, ಶಂಕರೇಗೌಡ, ಈಶ್ವರೇಗೌಡ, ತಿಮ್ಮಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

