ಸವಲತ್ತು ಕೊಡಿಸಲು ಲಂಚ: 3 ವರ್ಷ ಜೈಲು
ಚಿಕ್ಕಮಗಳೂರು: ಸೇವಾ ಪುಸ್ತಕವನ್ನು ಬೆಂಗಳೂರಿನಲ್ಲಿರುವ ಎ.ಜಿ. ಕಚೇರಿಗೆ ಕಳುಹಿಸಿ ಕನ್ನಡ ಭಾಷಾ ಸವಲತ್ತು ಕೊಡಿಸಲು ಲಂಚ ಪಡೆದ ಬಾಲಕೃಷ್ಣ ಎಂಬುವವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿದೆ.
ನಿವೃತ್ತ ಶಿಕ್ಷಕಿ ಶಾಂತಕುಮಾರಿ ಅವರು ಕನ್ನಡ ಭಾಷಾ ಸವಲತ್ತು ಪಡೆಯಲು ಚಿಕ್ಕಮಗಳೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಈ ಕಚೇರಿಯ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಬಾಲಕೃಷ್ಣ ಶಾಂತಕುಮಾರಿಯವರ ಸೇವಾ ಪುಸ್ತಕವನ್ನು ಎ.ಜಿ. ಕಚೇರಿಗೆ ಕಳುಹಿಸಿ ಕನ್ನಡ ಭಾಷಾ ಸವಲತ್ತು ಮಾಡಿಕೊಡಲು 3 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಚ್.ಎಸ್. ಕಮಲ ಅವರು, ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಬಾಲಕೃಷ್ಣ ಅವರಿಗೆ 3 ವರ್ಷ ಕಠಿಣ ಸಜೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಡಿ.ಬಿ. ಸುಜೇಂದ್ರ ವಾದ ಮಂಡಿಸಿದ್ದರು.
ಅಪಘಾತ: ತಾಯಿ ಮಗ ಸಾವು
ತರೀಕೆರೆ: ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಮಾನಸ ಕಾಲೇಜ್ ಬಳಿ ಗುರುವಾರ ರಾತ್ರಿ 8-45ರ ಸಮಯದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾದ ಘಟನೆ ನೆಡೆದಿದೆ.
ಮೃತಪಟ್ಟವರನ್ನು ಸಿಗಂಧೂರು ಸಮೀಪದ ತುಮರಿ ಗ್ರಾಮದವರಾಗಿದ್ದು, ತಾಯಿ ಹೇಮಲತ (45) ಮಗ ಧವನ್ (10) ಎಂದು ಪೋಲಿಸರು ಗುರುತಿಸಿದ್ದಾರೆ. ಚಾಲಕನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಸೇರಿಸಲಾಗಿದೆ. ಅಪಘಾತಕ್ಕೊಳಪಟ್ಟ ಕ್ರೂಸರ್ ವಾಹನ ಸಾಗರದಿಂದ ಮೈಸೂರಿಗೆ ಹೋಗುತ್ತಿತ್ತು. ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

