'ಪಂಚತಂತ್ರ'ದಲ್ಲೂ ಸಿಗದ ಗ್ರಾಪಂ ಸಮಗ್ರ ಮಾಹಿತಿ
ವಿಶೇಷ ವರದಿ
ಚಿಕ್ಕಮಗಳೂರು/ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ಕಾರ್ಯನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚತಂತ್ರ ತಂತ್ರಾಂಶದಲ್ಲಿ ಕಾಲ ಕಾಲಕ್ಕೆ ಮಾಹಿತಿ ಅಪ್‌ಲೋಡ್ ಮಾಡುವಲ್ಲಿ ಗ್ರಾಮ ಪಂಚಾಯಿತಿಗಳು ವಿಫಲವಾಗಿವೆ.
ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಕ್ಕೆ ಸಂಬಂಧಿಸಿ ಸಾಮಾನ್ಯ ಸಭೆ, ಗ್ರಾಮ ಪಂಚಾಯಿತಿ ಅನುಷ್ಠಾನಗೊಳಿಸಬೇಕಾದ ಹಲವು ಕಾರ್ಯಕ್ರಮಗಳು, ವಾರ್ಷಿಕ ಕ್ರಿಯಾಯೋಜನೆಗಳ ಮಾಹಿತಿ, ಪ್ರಗತಿ ವರದಿ, ವಾರ್ಷಿಕ ಪ್ರಗತಿ ವರದಿ, ವಾರ್ಡ್ ಸಭೆ, ಗ್ರಾಮ ಸಭೆ, ವಿಶೇಷ ಸಭೆಗಳ ಮಾಹಿತಿಯನು ಆಗಾಗ ಪಂಚತಂತ್ರ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕೆಂದು ಸರ್ಕಾರ ಹೊರಡಿಸಿರುವ ಆದೇಶದ ಬಗ್ಗೆ ಗ್ರಾಪಂ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ.
ಪಂಚತಂತ್ರ ವೆಬ್‌ಸೈಟ್‌ನಲ್ಲಿ ಸಮಗ್ರ ಮಾಹಿತಿ ಲಭ್ಯವಾಗುತ್ತಿಲ್ಲ. ಇದನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕಾರ್ಯದರ್ಶಿ ಏ.21ರಂದು ಆದೇಶ ಹೊರಡಿಸಿದ್ದಾರೆ. ಗ್ರಾಪಂಗಳು ಸಮಗ್ರ ಮಾಹಿತಿಯನು ಏ.30ರೊಳಗೆ ಅಪ್‌ಲೋಡ್ ಮಾಡಬೇಕು. ಈ ಸಂಬಂಧ ತಾಪಂ ಇಒಗಳು ಆಯಾ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಿದ್ದಾರೆ. ಇದಾಗಿ ಹಲವು ದಿನ ಕಳೆದರೂ ಗ್ರಾಪಂಗಳು ಸಮಗ್ರ ಮಾಹಿತಿ ಅಪ್‌ಲೋಡ್ ಮಾಡಿಲ್ಲ.
ಅಸಮಾಧಾನ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಶೇ.25ರಷ್ಟು ಹಣವನು ಖರ್ಚು ಮಾಡಿದ ಪ್ರಗತಿ ವಿವರವನು ಪ್ರತಿ ತಿಂಗಳ ಐದರೊಳಗೆ ಕಳುಹಿಸುವಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದೂ ಸರ್ಕಾರದ ಕಾರ್ಯದರ್ಶಿ ವಿವಿಧ ಜಿಲ್ಲೆಗಳಿಗೆ ಬರೆದಿರುವ ಪತ್ರದಲ್ಲಿ ಅಸಮಾಧಾನ ಹೊರಗೆಡವಿದ್ದಾರೆ. ದಾಖಲೆಗಳ ಕ್ರೋಡೀಕರಣ ಸರಿಯಾದ ಸಮಯದಲ್ಲಿ ನಡೆದರೆ ಆಯಾ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ, ವರ್ಗಗಳ ಜನಾಂಗಕ್ಕೆ ಮೀಸಲಿರಿಸಿರುವ ಅನುದಾನದಲ್ಲಿ ಎಷ್ಟು ವೆಚ್ಚ ಮಾಡಲಾಗಿದೆ ಎಂಬುದನು ತಿಳಿದುಕೊಳ್ಳಬಹುದು. ಹಾಗಾಗಿ ತಕ್ಷಣ ಮಾಹಿತಿ ಅಪ್‌ಲೋಡ್ ಮಾಡುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

