ಚಿಕ್ಕಮಗಳೂರು

ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ

Published On :

ಚಿಕ್ಕಮಗಳೂರು: ಅಭ್ಯರ್ಥಿ ಗೆಲವಿಗೆ ಪ್ರಾರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳಿ ಪೂಜೆ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಚ್.ಡಿ. ತಮ್ಮಯ್ಯ ಅವರು ತಿಳಿಸಿದ್ದಾರೆ.
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಗೆಲವು ಸಾಧಿಸಲಿದ್ದು, ಫಲಿತಾಂಶ ಹೊರಬಿದ್ದ ಬಳಿಕ ಪಾದಯಾತ್ರೆ ದಿನ ನಿಗದಿಪಡಿಸಿ, ಅಂದು ಬೆಳಗ್ಗೆ ಬೋಳರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೂಡಿಗೆರೆ ಮತ್ತು ಕೊಟ್ಟಿಗೆಹಾರದಲ್ಲಿ ಉಳಿದುಕೊಂಡು ಧರ್ಮಸ್ಥಳಕ್ಕೆ ತೆರಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.
ಸಾಧನೆ ಶೂನ್ಯ: ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ ಎಂದು ಟೀಕಿಸಿದ ಅವರು, ಲೋಕಸಭಾ ಚುನಾವಣೆ ಮುಗಿಯುವವರೆಗೆ ಮೌನ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ವಿದ್ಯುತ್ ದರ ಮತ್ತು ಬಸ್ ಪ್ರಯಾಣ ದರ ಹೆಚ್ಚಳಗೊಳಿಸಿದ್ದಾರೆ.
   ಪ್ರತಿ ಯೂನಿಟ್ಗೆ 35 ರಿಂದ 50 ಪೈಸೆ ಹೆಚ್ಚಳಗೊಳಿಸಿದ್ದು, ದರ ಹೆಚ್ಚಿಸಿರುವುದೇ ರಾಜ್ಯ ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಐದು ವಿಭಾಗಗಳು ಲಾಭದಾಯಕವಾಗಿದ್ದವು. ಈ ಸರ್ಕಾರದ ಅವಧಿಯಲ್ಲಿ ಐದು ವಲಯಗಳು ನಷ್ಟದಲ್ಲಿರುವುದರಿಂದ ಸರ್ಕಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳ ಪ್ರಯಾಣದರ ಹೆಚ್ಚಿಸಿದೆ. ಡೀಸೆಲ್ ದರವನ್ನು 1.9 ಪೈಸೆ ಹೆಚ್ಚಿಸಿದ್ದು, ಕೂಡಲೇ ಹೆಚ್ಚಿಸಿರುವ ದರವನ್ನು ಇಳಿಸಬೇಕೆಂದು ಒತ್ತಾಯಿಸಿದರು.
ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಎರಡು ತಿಂಗಳ ಕಾಲ ಗೋದಿ ವಿತರಿಸಿಲ್ಲ. ಬಡವರಿಗೆ ವಿತರಿಸಬೇಕಾಗಿರುವ 10,361 ಕ್ವಿಂಟಲ್ ಗೋದಿಯನ್ನು ಗೋದಾಮಿನಲ್ಲಿ ದಾಸ್ತನಿಡಲಾಗಿದೆ.
ಕೂಡಲೇ ಬಡವರಿಗೆ ನೀಡಬೇಕಾಗಿರುವ ಗೋದಿಯನ್ನು ವಿತರಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾಧ್ಯಕ್ಷ ಪುಷ್ಪರಾಜ್ ಹಾಗೂ ಬಿಜೆಪಿ ನಗರಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.