ಚಿಕ್ಕಮಗಳೂರು

ಮೀನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Published On :

ಚಿಕ್ಕಮಗಳೂರು:  ಮೀನುಗಾರಿಕೆ ಇಲಾಖೆ ವತಿಯಿಂದ ಒಳನಾಡು ಮೀನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿಗೆ ಸುಮಾರು 40 ಗ್ರಾಮೀಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 2 ತಿಂಗಳು ನಡೆಯಲಿರುವ ತರಬೇತಿಗೆ ಪ್ರತಿ ಅಭ್ಯರ್ಥಿಗೆ ಮಾಸಿಕ 2000 ಶಿಷ್ಯ ವೇತನ ಕೊಡಲಾಗುವುದು. ಅರ್ಜಿ ಸಲ್ಲಿಸಲು ಜೂ.8 ಕೊನೆ ದಿನ.
ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು,  ದುರಸ್ತಿ ಮಾಡುವುದು,
ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ,  ಪಾಲನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ಮೀನುಗಾರಿಕೆ ಇಲಾಖೆ ಪ್ರಕಟಣೆ  ತಿಳಿಸಿದೆ. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ  ಸಮೀಪದ ಮೀನುಗಾರಿಕೆ ಇಲಾಖೆ  ಕಚೇರಿ, ಅಥವಾ ದೂರವಾಣಿ ಸಂಖ್ಯೆ 08282-256252 ಇಲ್ಲಿಗೆ ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.