ಚಿಕ್ಕಮಗಳೂರು

ತನಿಕೋಡು ಪ್ರಕರಣ ನ್ಯಾಯಾಂಗ ತನಿಖೆ ಆರಂಭ

Published On :

ಶೃಂಗೇರಿ: ಏಪ್ರಿಲ್ 19 ರಂದು ತನಿಕೋಡು ಅರಣ್ಯ ತಪಾಸಣಾ ಕೇಂದ್ರದ ಬಳಿ ನಡೆದ ಶೂಟೌಟ್ ಪ್ರಕರಣದ ನ್ಯಾಯಾಂಗ ತನಿಖೆ ಮಂಗಳವಾರದಿಂದ ಆರಂಭಗೊಂಡಿತು. ತನಿಖಾಧಿಕಾರಿಯಾಗಿ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ತನಿಖೆ ಆರಂಭಿಸಿದರು. ಘಟನಾ ಸ್ಥಳವಾದ ತನಿಕೋಡಿಗೆ ತೆರಳಿ ಸ್ಥಳ ಪರಿಶೀಲಿಸಿ, ನಂತರ ಸ್ಥಳೀಯರಿಂದ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸಿದರು. ನಂತರ ತಾಲೂಕು ಕಚೇರಿ ಕೊಠಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಹೇಳಿಕೆ ಪಡೆದುಕೊಂಡರು. ಆದರೆ ಪ್ರಕರಣದ ಆರೋಪಿಯಾಗಿರುವ ಎಎನ್ಎಫ್ ಸಿಬ್ಬಂದಿ ನವೀನ್ ನಾಯಕ್ನನ್ನು ವಿಚಾರಣೆಗೆ ಕರೆತಂದಿರಲಿಲ್ಲ. ಪ್ರಕರಣದಲ್ಲಿ ಶೂಟೌಟ್ನಲ್ಲಿ ಮೃತಪಟ್ಟ ಕಬೀರ್ ಕುಟುಂಬದ ಸದಸ್ಯರು ಸೇರಿದಂತೆ ಘಟನೆ ನಡೆಯುವಾಗ ಸ್ಥಳದಲ್ಲಿದ್ದವರು ಹಾಜರಿರಲಿಲ್ಲ. ಎಸಿ ಚೆನ್ನಬಸಪ್ಪ, ಕೆರೆಕಟ್ಟೆ ವನ್ಯಜೀವಿವಲಯದ ಶ್ರಿನಾಥ್ ಕಡೋಲ್ಲರ್, ಶೃಂಗೇರಿ ಪೊಲೀಸ್ ಇನ್ಸ್ಪೆಕ್ಟರ್ ಸುಧೀರ್ ಹೆಗ್ಡೆ, ತಹಸೀಲ್ದಾರ್ ಸಣ್ಣರಂಗಯ್ಯ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ತನಿಖೆಗೆ 45 ದಿನಗಳ ಕಾಲಾವಕಾಶ ನೀಡಿದ್ದು, ಈಗಾಗಲೇ ತನಿಖೆ ಆರಂಭಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಶ ತನಿಖೆ ನಡೆಸಿ ಶೀಘ್ರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ವಿಶ್ವಾಸ ವ್ಯಕ್ತಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.