ಚಿಕ್ಕಮಗಳೂರು

ಭದ್ರಾವತಿಯಲ್ಲಿ ಬಿಜೆಪಿ ವಿಜಯೋತ್ಸವ

Published On :

ಕ.ಪ್ರ.ವಾರ್ತೆ, ಭದ್ರಾವತಿ, ಮೇ.16
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಗೆಲವು ಸಾಧಿಸಿದ ಹಿನ್ನೆಲೆ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಅಂಬೇಡ್ಕರ್ ವೃತ್ತದ ಬಳಿ ವಿಜಯೋತ್ಸವ ಆಚರಿಸಿದರು.
ಅತ್ಯಧಿಕ ಮತಗಳ ಅಂತರದಿಂದ ಮುಂದಿರುವ ಸುದ್ದಿ ಕೇಳಿಯೇ ಸಂಭ್ರಮದಲ್ಲಿ ಮುಳುಗಿದ್ದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಅಲ್ಲಿಂದ ಅಧಿಕ ಸಂಖ್ಯೆಯಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಬಾಜಾ ಭಜಂತ್ರಿಗಳೊಂದಿಗೆ ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಬಿ.ಎಚ್. ರಸ್ತೆ, ಮಾಧವಾಚಾರ್ ವೃತ್ತ, ಸಿ.ಎನ್. ರಸ್ತೆ ಮೂಲಕ ಮೆರವಣಿಗೆ ನಡೆಸಿ ರಂಗಪ್ಪ ವೃತ್ತದಲ್ಲಿ ಸಮಾವೇಶಗೊಂಡರು. ಪಟಾಕಿ, ಸಿಹಿ ಹಂಚಿದ್ದಲ್ಲದೆ, ಕಾರ್ಯಕರ್ತರು ಪರಸ್ಪರ ಗುಲಾಲು ಎರಚಿಕೊಂಡು ಸಂತೋಷಪಟ್ಟರು.
ಪಕ್ಷದ ಭದ್ರಾವತಿ ಕ್ಷೇತ್ರ ಘಟಕದ ಅಧ್ಯಕ್ಷ ಮಂಜು ರಂಗಪ್ಪ ವೃತ್ತದ ಬಳಿ ಮಾತನಾಡಿ, ಪಕ್ಷದ ಅಭ್ಯರ್ಥಿಯ ಗೆಲವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಪಕ್ಷದ ವಿವಿಧ ಸ್ತರಗಳ ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ರೇವಣ್ಣ, ಸುನಿತಾ ನಂಬಿಯಾರ್, ಆರ್.ಎಸ್. ಶೋಭ, ಗಿರಿಗೌಡ, ಐತಾಳ್, ರಾಘವೇಂದ್ರ, ಜೆ.ಮೂರ್ತಿ, ಪ್ರಭಾಕರ್, ವೆಂಕಟೇಶ್, ಬಸವರಾಜ್, ನಗರಸಭಾ ಸದಸ್ಯರಾದ ವಿ.ಕದಿರೇಶ್, ಕೆ.ಎನ್. ಭೈರಪ್ಪಗೌಡ, ಅಂಜನಪ್ಪ, ಜಿ.ಆನಂದಕುಮಾರ್, ಬಾ.ನಂ.ರಮೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಮೆರವಣಿಗೆಯಲ್ಲಿಪಾಲ್ಗೊಂಡಿದ್ದರು.
ಬಿ.ಎಸ್. ಯಡಿಯೂರಪ್ಪ ಅವರ ವಿಜಯದಿಂದ ಸಂತೋಷಗೊಂಡ ಜೈನ್ ಯುವಕರ ಸಂಘ, ವಿಶ್ವಕರ್ಮ ದೈವಜ್ಞ ಸಮಾಜ ಹಾಗೂ ಸುತ್ತಮುತ್ತಲಿನ ನಾಗರಿಕರು ಲಾಡು ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಮೇ 16 ರಂದು ಪ್ರಕಟವಾದ 16ನೇ ಲೋಕಸಭಾ ಚುನಾವಣೆಯ ಫಲಿತಾಂಶ ಬಿಜೆಪಿ ಪರವಾಗಿ ಬಹುಮತ ಸಾಬೀತಾದ ಬಗ್ಗೆ ತಮ್ಮ ಸಂತಸ ವ್ಯಕ್ತಪಡಿಸಿದ ಅವರು, ಮೋದಿ ಮೇ 21 ರಂದು ಸರ್ಕಾರ ರಚನೆ ಮಾಡುವ ಪ್ರಸ್ತಾವನೆ ಸ್ವಾಗತಿಸಿದರು.
ಜೈನ್ ಯುವಕ ಸಂಘದ ಸುರೇಶ್, ಕೈಲಾಸ್ ಶರ್ಮ, ಸುರೇಂದ್ರ ಜೈನ್, ವಿಜಯಕುಮಾರ್ ಶರ್ಮಾ ಮೊದಲಾದವರು ವಿಜಯೋತ್ಸವದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.