ಚಿಕ್ಕಮಗಳೂರು

ದೇವೇಗೌಡರ ಗೆಲವಿಗೆ ಅಭಿವೃದ್ಧಿಯೇ ಶ್ರೀರಕ್ಷೆ

Published On :

ಕ.ಪ್ರ.ವಾರ್ತೆ ್ಣ ಕಡೂರು ್ಣ ಮೇ 16
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್‌ದಿಂದ ಶುಕ್ರವಾರ ವಿಜಯೋತ್ಸವ ಆಚರಿಸಲಾಯಿತು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಮಾಜಿ ಪುರಸಭಾಧ್ಯಕ್ಷ ಮುಖಂಡ ಕೆ.ಎಚ್ ಲಕ್ಕಣ್ಣ, ಅಲ್ಪಸಂಖ್ಯಾತರ ವಿಭಾಗದ ತಾಲೂಕು ಅಧ್ಯಕ್ಷ ಎನ್. ಇಮಾಮ್ ನೇತೃತ್ವದಲ್ಲಿ ಪಟ್ಟಣದ ಕೆಎಲ್‌ವಿ ವೃತ್ತ ಹಾಗೂ ಪಟ್ಟಣದ ದೇವರಾಜು ಅರಸು ರಸ್ತೆಯಲ್ಲಿರುವ ಜೆಡಿಎಸ್ ಕಚೇರಿಯಲ್ಲೂ ಪಟಾಕಿ ಸಿಡಿಸಿ ಸಂಭ್ರಮೋತ್ಸವ ಆಚರಿಸಲಾಯಿತು.
ಈ ಸಂದರ್ಭಧಲ್ಲಿ ಮಾತನಾಡಿದ ಭಂಡಾರಿ ಶ್ರೀನಿವಾಸ್ ಮತ್ತಿತರ ಮುಖಂಡರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕೈಗೊಂಡಿರುವ ನೂರಾರು ಕೋಟಿ ರು.ಗಳ ಅಭಿವೃದ್ಧಿ ಕಾರ್ಯಗಳು ಅವರಿಗೆ ಬೆಂಗಾವಲಾಗಿವೆ. ಆದ್ದರಿಂದ ಗೌಡರನ್ನು ಮತದಾರ ಪ್ರಭುಗಳು ಆಯ್ಕೆ ಮಾಡಿ ರೈತರ ಪರ ಹೋರಾಟಕ್ಕಾಗಿ ಮತ್ತೆ ಸಂಸತ್ತಿಗೆ ಕಳುಹಿಸಿದ್ದಾರೆ. ದೇವೇಗೌಡರು ಯಗಚಿ ಜಲಾಶಯ ಯೋಜನೆಯಿಂದ 53 ಸಾವಿರ ಹೆಕ್ಟೇರ್‌ಗೆ ನೀರುಣಿಸುವ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.
ಮುಖಂಡರಾದ ತಿಪ್ಪೇಶ್, ಮಂಜುನಾಥ್, ಕದಂಬ ವೆಂಕಟೇಶ್, ರಮೇಶ್, ಕಾಂತರಾಜು, ಪಂಗುಲಿ ತಿಮ್ಮಯ್ಯ, ಶಂಕರ್, ಲೋಕೇಶ್, ಆಟೋ ರಮೇಶ್ ಮತ್ತಿತರರು ಇದ್ದರು.
ಶೋಭಾ ಗೆಲವು: ಸುರೇಶ್ ಹರ್ಷ
ತರೀಕೆರೆ: ಅತ್ಯಧಿಕ ಬಹುಮತದಿಂದ ಗೆಲವು ಸಾಧಿಸಿದ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಮಾಜಿ ಶಾಸಕ ಡಿ.ಎಸ್. ಸುರೇಶ್, ಜಿ.ಪಂ. ಸದಸ್ಯರಾದ ಕೆ.ಆರ್. ಆನಂದಪ್ಪ, ಎಸ್.ಬಿ. ಆನಂದಪ್ಪ ಅವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಅಭಿವೃದ್ಧಿಯ ಶುಭ ಸೂಚಕ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಅಭ್ಯರ್ಥಿ ಗೆಲವಿಗೆ ಕಾರಣರಾದ ಕ್ಷೇತ್ರದ ಮತದಾರರಿಗೆ, ಹಗಲಿರಳೂ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.