ಚಿಕ್ಕಮಗಳೂರು

ಮಲೆನಾಡಿನ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ: ಶೋಭಾ ಕರಂದ್ಲಾಜೆ

Published On :

ಕ.ಪ್ರ.ವಾರ್ತೆ, ಶೃಂಗೇರಿ, ಮೇ 18
ಜಿಲ್ಲೆಯ ಭಾಗದ ಪ್ರಮುಖ ಸಮಸ್ಯೆಗಳಾದ ಅಡಕೆ, ಅಕ್ರಮ- ಸಕ್ರಮ, ಒತ್ತುವರಿ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸದಸ್ಯೆ ಶೋಭಾ ಕರಂದ್ಲಾಜೆ ತಿಳಿಸಿದರು.
ಪಟ್ಟಣದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಕ್ಕೆ ತಕ್ಕಂತೆ ಸ್ಪಂದಿಸುತ್ತೇನೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಗಮನ ಸೆಳೆಯುತ್ತೇನೆ ಎಂದರು.
ಜನರು ನಿರೀಕ್ಷೆಗೂ ಮೀರಿ ಅಭೂತಪೂರ್ವ ಗೆಲವು ನೀಡಿದ್ದಾರೆ. ಇದು ನರೇಂದ್ರ ಮೋದಿ, ಜನರ, ಪಕ್ಷದ, ಕಾರ್ಯಕರ್ತರ ಗೆಲುವಾಗಿದೆ. ಮೋದಿ ಅವರನ್ನು ಪ್ರಧಾನಿ ಮಾಡಲು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಎನ್‌ಡಿಎಗೆ ಗೆಲವು ನಿರಿಕ್ಷಿಸಲಾಗಿತ್ತು. ಆದರೆ, 35 ವರ್ಷಗಳಲ್ಲಿ ಕಾಂಗ್ರೇಸ್ಸೇತರ ಪಕ್ಷಕ್ಕೆ ಇಷ್ಟೊಂದು ಬಹುಮತ ನೀಡಿರುವುದು ಐತಿಹಾಸಿಕ ದಾಖಲೆಯಾಗಿದೆ ಎಂದರು.
ನಾಡಿನ ಅಭಿವೃದ್ಧಿಗಾಗಿ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ.  ಮಹಿಳೆಯರ ಧ್ವನಿಯಾಗಿ ದುಡಿಯುತ್ತೇನೆ. ಭಾರಿ ಅಂತರದಿಂದ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಅಭಿನಂದನೆಗಳು ಎಂದರು.
ಶಾಸಕ ಡಿ.ಎನ್. ಜೀವರಾಜ್, ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಚ್.ಎಸ್. ನಟೇಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಅಮಿತಾ ಸತ್ಯನಾರಾಯಣ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು. ಪಟ್ಟಣದ ಮುಖ್ಯ ದ್ವಾರದಿಂದ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ ಜೈಕಾರ ಕೂಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.