ಚಿಕ್ಕಮಗಳೂರು

'ಗುಜರಾತ್ ಅಭಿವೃದ್ಧಿ ವಿಶ್ವಕ್ಕೆ ಮಾದರಿ'

Published On :

ಕ.ಪ್ರ.ವಾರ್ತೆ, ಬಾಳೆಹೊನ್ನೂರು, ಮೇ 18
ಗುಜರಾತ್ ಮಾದರಿಯ ಅಭಿವೃದ್ಧಿ ದೇಶದೆಲ್ಲೆಡೆ ಆಗಬೇಕು ಎಂಬ ದೃಷ್ಟಿಯಿಂದ ಈ ಬಾರಿಯ ಚುನಾವಣೆಯಲ್ಲಿ ಜನ ನರೇಂದ್ರ ಮೋದಿಯನ್ನು ಬೆಂಬಲಿಸಿದ್ದಾರೆ ಎಂದು ಬಾಳೆಹೊನ್ನೂರು ಹೋಬಳಿ ನಮೋ ಬ್ರಿಗೇಡ್ ಘಟಕದ ಅಧ್ಯಕ್ಷ ಬಿ.ವಿ. ದೀಪಕ್ ಭಟ್ ಹೇಳಿದ್ದಾರೆ.
ಗುಜರಾತ್‌ನಲ್ಲಿ ನಮೋ ಮಾಡಿದ ಅಭಿವೃದ್ಧಿ ಕಾರ್ಯಗಳು ವಿಶ್ವಕ್ಕೇ ಮಾದರಿಯಾಗಿದ್ದು, ದೇಶದ ಜನತೆ ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಲು ಹಾತೊರೆಯುತ್ತಿದ್ದರು. ಆವರ ದೇಶಪ್ರೇಮ, ಕಾರ್ಯವೈಖರಿ ಇತರರಿಗೂ ಮಾದರಿ, ಅನುಕರಣೀಯವಾಗಿದೆ.
ನಮೋ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದೇಶದಲ್ಲಿನ ಪ್ರಮುಖ ಸಮಸ್ಯೆಗಳಾದ ಭಯೋತ್ಪಾದನೆ, ಭ್ರಷ್ಟಾಚಾರ, ನಕ್ಸಲ್, ಆರ್ಥಿಕ ಏರಿಳಿತ, ಉದ್ಯೋಗ ಸಮಸ್ಯೆಗಳು ದೂರಾಗಲಿವೆ. ಈ ಚುನಾವಣೆಯಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಿದ್ದು, ಪ್ರತಿಯೊಬ್ಬರೂ ಅಭಿವೃದ್ಧಿಯನ್ನು ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರಿಗಾಗಿ ಹುಟ್ಟಿಕೊಂಡ ನಮೋ ಬ್ರಿಗೇಡ್ ಸಂಘಟನೆಯು ದೇಶಾದ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಮತದಾನದ ಪ್ರಮಾಣ ಹೆಚ್ಚಳವಾಗಲು ಕಾರಣವಾಗಿದೆ ಹಾಗೂ ಸಂಘಟನೆಯು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಸ್ವತಂತ್ರವಾಗಿ, ನಿಷ್ಕಳಂಕವಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ಪ್ರತಿಯೊಬ್ಬ ಕಾರ್ಯಕರ್ತರಿಗೂ ಇದೆ.
ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಮೂಲಕ ಮೊದಲ ಜಯವನ್ನು ನೀಡಿದ ಕೀರ್ತಿ ರಾಜ್ಯದ ಜನತೆಗಿದ್ದು, ಬ್ರಿಗೇಡ್ ಸಂಘಟನೆಯು ನಿರೀಕ್ಷಿಸಿದಷ್ಟು ಸ್ಥಾನಗಳು ದೇಶದಲ್ಲಿ ಬಿಜೆಪಿಗೆ ಲಭಿಸಿದ್ದು, ತಾವು ಇರಿಸಿದ ಹಲವು ಅಭಿವೃದ್ಧಿ ಕಾರ್ಯದ ಹಂಬಲ, ನಿರೀಕ್ಷೆಗಳು ಈಡೇರುವ ಭರವಸೆ ಇದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.