ದಲಿತ ನೌಕರರಿಗೆ ಕಿರುಕುಳ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು: ದಲಿತ ನೌಕರರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ನಗರದ ಭಾರತೀ ವಿದ್ಯಾಸಂಸ್ಥೆಯ ವಿರುದ್ಧ ದಲಿತ- ಪ್ರಗತಿಪರ ಸಂಘಟನೆಗಳ ಒಕ್ಕೂಟ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
ಭಾರತೀ ವಿದ್ಯಾಸಂಸ್ಥೆಯಲ್ಲಿ ಪ್ರಯೋಗ ಶಾಲಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟಸ್ವಾಮಿ ಅವರಿಗೆ ಕಳೆದ 10 ತಿಂಗಳಿಂದ ವೇತನ ಬಿಡುಗಡೆ ಮಾಡದಿರುವುದು ಜಾತಿವಾದಿತನ ಹಾಗೂ ನೊಂದ ಕುಟುಂಬಕ್ಕೆ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ಪ್ರತಿಭಟನಾಕಾರರು ತಿಳಿಸಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಜಯರಾಮೇಗೌಡ ಹಾಗೂ ಮುಖ್ಯ ಶಿಕ್ಷಕ ಎ. ಪುಟ್ಟಪ್ಪ ಅವರು ದಲಿತ ನೌಕರನಿಗೆ ಮಾನಸಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸು ದಾಖಲಿಸಲಾಗಿದೆ. ಕೇಸನ್ನು ಹಿಂಪಡೆಯಬೇಕೆಂಬ ದುರುದ್ದೇಶದಿಂದ ಪುಟ್ಟಸ್ವಾಮಿಯವರ 10 ತಿಂಗಳ ವೇತನ ತಡೆಹಿಡಿಯುವ ಜತೆಗೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದು, ಕಾನೂನುಬಾಹಿರ. ಈ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ನೊಂದ ದಲಿತನ ಪರವಾಗಿ ತೀರ್ಪು ಹೊರ ಬಂದಿದೆ. ಹಾಗಿದ್ದರೂ ಅಮಾನತು ಆದೇಶ ರದ್ದುಪಡಿಸಿಲ್ಲ. ಜತೆಗೆ ವೇತನವನ್ನು ಈವರೆಗೆ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

