ರಸಗೊಬ್ಬರ ದಾಸ್ತಾನು, ದರಪಟ್ಟಿ ಪ್ರಕಟಿಸಲು ಸೂಚನೆ
ಕ.ಪ್ರ.ವಾರ್ತೆ, ತರೀಕೆರೆ, ಮೇ 20
ವಿವಿಧ ಬಗೆಯ ಗೊಬ್ಬರದ ದಾಸ್ತಾನು ಮತ್ತು ದರಗಳನ್ನು ಎಲ್ಲರಿಗೂ ಕಾಣುವಂತೆ ಪ್ರಕಟಿಸಬೇಕೆಂದು ಉಪವಿಭಾಗಾಧಿಕಾರಿ ಅನುರಾಧ ತಿಳಿಸಿದ್ದಾರೆ.
ತಾಲೂಕು ಅಡಳಿತ, ಕೃಷಿ ಇಲಾಖೆ ವತಿಯಿಂದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಮಂಗಳವಾರ ಏರ್ಪಾಡಾಗಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಮತ್ತು ಗೊಬ್ಬರ ವಿತರಕರ ಸಭೆಯಲ್ಲಿ ಮಾತನಾಡಿದರು.
ಗೊಬ್ಬರದ ದರ, ದಾಸ್ತಾನು ವಿವರ ಪ್ರಕಟಿಸಬೇಕು. ರೈತರಿಗೆ ಸಮರ್ಪಕವಾಗಿ ಗೊಬ್ಬರ ಸಿಗಬೇಕು. ದೂರು ಬಾರದಂತೆ ನೋಡಿಕೊಳ್ಳಬೇಕು ಎಂದರು.
ತಹಸೀಲ್ದಾರ್ ಶಿವಕುಮಾರ್ ಮಾತನಾಡಿ, ತಾಲೂಕಿನ ರೈತರಿಗೆ ಅಗತ್ಯವಾದ ಗೊಬ್ಬರ ಕೊಡಬೇಕು. ಗೊಬ್ಬರ ದಾಸ್ತಾನು ಇಲ್ಲವೆಂದು ಹೇಳಬಾರದು. ಪ್ರತಿ ಹಳ್ಳಿಯಲ್ಲೂ ಗೊಬ್ಬರ ಸಮರ್ಪಕವಾದ ರೀತಿಯಲ್ಲಿ ವಿತರಣೆಯಾಗಬೇಕು ಎಂದು ತಿಳಿಸಿದರು.
ಕೊರತೆ ಇಲ್ಲ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಮಾತನಾಡಿ, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ವಿತರಣೆಯಾಗಬೇಕು. ರಸಗೊಬ್ಬರದ ಕೊರತೆ ಇಲ್ಲ. 2000 ಮೆಟ್ರಿಕ್ ಟನ್ ದಾಸ್ತಾನು ಇದೆ, ಕಡೂರಿನಲ್ಲಿ ಎರಡೂವರೆ ಸಾವಿರ ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನು ಇದೆ. ಎಂಆರ್ಪಿ ದರ ಏನು ಇದೆಯೋ ಅದೇ ರೀತಿ ಗೊಬ್ಬರ ಮಾರಾಟ ಮಾಡಬೇಕು ಎಂದರು.
ಹೆಚ್ಚು ಬೇಡಿಕೆ: ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚು ಬೇಡಿಕೆ ಬರುತ್ತದೆ. ಗೊಬ್ಬರ ದಾಸ್ತಾನು ಇದೆ. ವಿವಿಧ ಗೊಬ್ಬರಗಳ ದಾಸ್ತಾನು, ಅದಕ್ಕೆ ಸಂಬಂಧಿಸಿದ ದರಪಟ್ಟಿ ಪ್ರಕಟಿಸಬೇಕು. ವಿತರಕರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ದೇವರಾಜ್, ಗುರುಮೂರ್ತಿ ಮತ್ತಿತರರು ಮತನಾಡಿದರು. ತೋಟಗಾರಿಕೆ ಇಲಾಖೆ ಅಧಿಕಾರಿಗಳು, ತಾಲೂಕಿನಾದ್ಯಂತ ವಿತರಕರು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

