ಸೌಲಭ್ಯಕ್ಕೆ ಆಗ್ರಹಿಸಿ ರಾತ್ರಿ ಪ್ರತಿಭಟನೆ
ಕ.ಪ್ರ.ವಾರ್ತೆ ಟಿ ಬೀರೂರು ಟಿ ಮೇ 23
ಇಲ್ಲಿನ ಭಗವತ್ ನಗರದ ಬಡಾವಣೆಗೆ ರಸ್ತೆ ಸೌಕರ್ಯ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ನಿವಾಸಿಗಳು ಗುರುವಾರ ರಾತ್ರಿ ಪುರಸಭೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಿಂದ ಸುಮಾರು 3 ಕಿಮೀ ಅಂತರದಲ್ಲಿರುವ ಭಗವತ್ ನಗರ ಆಶ್ರಯ ಬಡಾವಣೆ ನಿರ್ಮಾಣಗೊಂಡು 18 ವರ್ಷ ಕಳೆದರೂ ಬಡಾವಣೆಗೆ ತೆರಳಲು ರಸ್ತೆ ಸೌಕರ್ಯವಿಲ್ಲದೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆ ಬಗೆಹರಿಸಿಕೊಡಬೇಕೆಂದು ಪುರಸಭಾ ಆಡಳಿತ, ತಾಲೂಕು ದಂಡಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಪಂದಿಸುತ್ತಿಲ್ಲ: ಬಡಾವಣೆಗೆ ರಸ್ತೆ ಸೌಕರ್ಯ ಕಲ್ಪಿಸಿಕೊಡಬೇಕೆಂದು ಹಲವು ಬಾರಿ ಪ್ರತಿಭಟನೆ, ಧರಣಿ ಮೂಲಕ ಮನವಿ ಸಲ್ಲಿಸಿದರೂ ಸ್ಪಂದನೆ ಇಲ್ಲದಂತಾಗಿದೆ. ರಸ್ತೆ ಸೌಕರ್ಯವಿಲ್ಲದ ಕಾರಣ ತುರ್ತು ಸಂದರ್ಭಗಳಲ್ಲಿ ಬಡಾವಣೆಗೆ ಆಟೋ ಸಹಿತ ಯಾವುದೇ ವಾಹನಗಳು ಬಾರದಿರುವುದರಿಂದ ಗರ್ಭಿಣಿಯರು, ಅನಾರೋಗ್ಯ ಪೀಡಿತ ವೃದ್ಧರನ್ನು ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ, ನಾವು ನರಕಯಾತನೆ ಅನುಭವಿಸುವಂತಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಭರವಸೆ: ರಾತ್ರಿ 10 ಗಂಟೆಗೆ ತಾಲೂಕು ದಂಡಾಧಿಕಾರಿ ಚಿನ್ನರಾಜು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ಇನ್ನೂ ಮೂರು ದಿನಗಳಲ್ಲಿ ಸ್ಥಳ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ದೊರಕಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ಪುರಸಭಾ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಪುರಸಭಾಧ್ಯಕ್ಷೆ ಗೀತಾ ಹೇಮಂತ್, ಪುರಸಭಾ ಸದಸ್ಯರಾದ ಮಾರ್ಗದ ಮಧು, ಬಸವರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

