1 ಲಕ್ಷ ಮೌಲ್ಯದ ಮರಳು ವಶ
ನರಸಿಂಹರಾಜಪುರ: ತಾಲೂಕಿನಲ್ಲಿ ಅಕ್ರಮ ಮರುಳುಗಾರಿಕೆ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರು ಹಾಗೂ ಮಾಧ್ಯಮದಲ್ಲಿ ಬಂದ ವರದಿ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ತಾಲೂಕಿನ ಹಲವೆಡೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಗುರುವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಮಹೇಶ್ ನೇತೃತ್ವದಲ್ಲಿ ತಾಲೂಕಿನ ಶಿರಗಳಲೆ, ಲಿಂಗಾಪುರ, ಪಟ್ಟಣದ ವಿವಿಧ ಸ್ಥಳ ಸೇರಿದಂತೆ 9 ಕಡೆ ದಾಳಿ ನಡೆಸಲಾಗಿದೆ. ಅಕ್ರಮವಾಗಿ ಸಂಗ್ರಹಿಸಿದ್ದವರಿಗೆ ದಂಡ ವಿಧಿಸಲಾಗಿದೆ.
ದಾಳಿಯಲ್ಲಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ರವಿಚಂದ್ರನ್, ರೆವನ್ಯೂ ಇನ್ಸ್‌ಪೆಕ್ಟರ್ ಶ್ಯಾಮ ನಾಯಕ್, ಗ್ರಾಮ ಲೆಕ್ಕಾಧಿಕಾರಿಗಳಾದ ವಿಶ್ವನಾಥ್, ಸುನೀಲ್ ಪಾಲ್ಗೊಂಡಿದ್ದರು.
ತಾಲೂಕಿನಾದ್ಯಂತ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮರಳನ್ನು ಸಂಗ್ರಹಿಸಿಟ್ಟು ಕೃತಕ ಅಭಾವ ಸೃಷ್ಟಿಸಿ ಎರಡು ಪಟ್ಟು ಹೆಚ್ಚಿಗೆ ಮಾರಾಟ ಮಾಡಲಾಗುತ್ತಿತ್ತು. ಇದರಿಂದ ಆಶ್ರಯ ಮನೆ ನಿರ್ಮಿಸುವುವರಿಗೆ, ಜನ ಸಾಮಾನ್ಯರಿಗೆ ಮರಳು ಸಿಕ್ಕದೆ ಪರದಾಡುವಂತಾಗಿತ್ತು.
ಆತ್ಮಹತ್ಯೆ
ನರಸಿಂಹರಾಜಪುರ: ತಾಲೂಕಿನ ಕೊನೋಡಿಯ ಸೀತಾರಾಮ ಶೆಟ್ಟಿ (42) ಎಂಬುವರು ತಮ್ಮ ಮನೆಯಲ್ಲೇ ವಿಷ ಕಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸೀತಾರಾಮ ಶೆಟ್ಟಿಯು ಕಳೆದ 2 ವರ್ಷಗಳಿಂದ ಬೇರೆ ಊರಿಗೆ ಕೆಲಸಕ್ಕೆ ಹೋಗಿದ್ದು, ಮನೆಯಲ್ಲಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳು ವಾಸವಾಗಿದ್ದರು. ಕಳೆದ ಎರಡು ದಿನದ ಹಿಂದೆ ಊರಿಗೆ ಬಂದಿದ್ದನು. ಶುಕ್ರವಾರ ಮಧ್ಯಾಹ್ನ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

