ಚಿತ್ರದುರ್ಗ

'ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ'

Published On :

ಚಿತ್ರದುರ್ಗ: ಫೆ.9ರಂದು ಹಮ್ಮಿಕೊಂಡಿರುವ ಜನಪ್ರತಿನಿಧಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಭಾರತೀಯ ಜನತಾ  ಪಕ್ಷದಿಂದ ಆಯ್ಕೆಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವುದಿಲ್ಲ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಮಹಾಲಿಂಗಪ್ಪ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೊಂದು ಅಪ್ಪಟ ಚುನಾವಣೆಯ ತಂತ್ರವಾಗಿರುವುದರಿಂದ ಶಾಸಕರು ಹಮ್ಮಿಕೊಂಡಿರುವ ಈ ಸಮಾರಂಭಕ್ಕೆ ಪಕ್ಷದ ಯಾವುದೇ ಪ್ರತಿನಿಧಿಗಳು ಭಾಗವಹಿಸಿದಿರಲು ತೀರ್ಮಾನ ಕೈಗೊಳ್ಳಲಾಗಿದೆಯೆಂದು ಸ್ಪಷ್ಟಪಡಿಸಿದರು.
ವಿಧಾನಸಭಾ ಚುನಾವಣೆಗೆ ತಯಾರಿಗಳು ನಡೆಯುತ್ತಿರುವ ಈ ಸಂಧರ್ಭ ಈ ಬಾರಿಯೂ ಸ್ಫರ್ಧಾಕಾಂಕ್ಷಿಯಾಗಿರುವ ಶಾಸಕರು ಸ್ಧಳೀಯ ಸಂಸ್ಥೆಗಳ ಜನಪ್ರತಿನಿಧಿಗಳನ್ನು ಓಲೈಸುವ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು.
ಶಾಸಕರು ಗ್ರಾಮ ಮಟ್ಟದ ಚುನಾಯಿತ ಪ್ರತಿನಿಧಿಗಳನ್ನು ಓಲೈಸಲು ಮಾಡುತ್ತಿರುವ ಈ ಕಾರ್ಯ ಯಶಸ್ವಿಯಾಗುವುದಿಲ್ಲ. ಯಾಕೆಂದರೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇರುವ ಪಂಚಾಯ್ತಿಗಳು ಬಿಜೆಪಿ ಹಿಡಿತದಲ್ಲಿದೆ. ಜನಪ್ರತಿನಿಧಿಗಳು ಪಕ್ಷದ ತೆಕ್ಕೆಯಲ್ಲಿದ್ದಾರೆಂದು ಹೇಳಿದರು.
ತಾಲೂಕು ಪಂಚಾಯ್ತಿಯಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದು ಚುನಾವಣೆಯಲ್ಲಿ ಈ ಜನಪ್ರತಿನಿಧಿಗಳಿಂದ ಎದುರಾಗಬುಹುದಾದ ಸಮಸ್ಯೆ ನಿವಾರಿಸಿಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆಯೆಂದು ಹೇಳಿದರು.
ಬರುವ ಚುನಾವಣೆಯಲ್ಲಿ ಶಾಸಕರು ಗೆಲ್ಲುವ ಸಾಧ್ಯತೆ ಇಲ್ಲದಿರುವುದರಿಂದ ಆತಂಕಕ್ಕೆ ಬಿದ್ದಿರುವ ಶಾಸಕರು ಇಂತಹ ಪ್ರಯತ್ನಗಳಿಗೆ ಮುಂದಾಗಿದ್ದಾರೆಂದು ಆರೋಪಿಸಿದರು.
ಆಹ್ವಾನ ಪತ್ರಿಕೆಯಲ್ಲಿ ಹೆಸರು: ಈ ನಡುವೆ ಅಭಿನಂದನಾ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನ ಮಾಡಿಲ್ಲ. ಈ ಕಾರ್ಯಕ್ರಮ ರೂಪಿಸುವಾಗ ಯಾರ ಅನುಮತಿಯನ್ನೂ ಪಡೆದಿರುವುದಿಲ್ಲ. ಆದರೆ ಏಕಾಏಕಿ ಸಮಾರಂಭ ಆಯೋಜಿಸಿ ಆಹ್ವಾನ ಪತ್ರಿಕೆಯಲ್ಲಿ ಹೆಸರುಗಳನ್ನು ಹಾಕಿಸಿದ್ದಾರೆಂದು ದೂರಿದರು.
ಜೆಡಿಎಸ್ ಶಾಸಕರಾಗಿ ತಮ್ಮ ಪಕ್ಷದಿಂದ ಗೆದ್ದವರಿಗೆ ಮಾತ್ರ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಮಾಡುವುದು ಬಿಟ್ಟು, ಎಲ್ಲ ಪಕ್ಷದ ಜನಪ್ರತಿನಿಧಿಗಳಿಗೂ ಸನ್ಮಾನ ಮಾಡುವ ಪ್ರಯತ್ನದ ಹಿಂದೆ ಇರುವ ಉದ್ದೇಶವನ್ನು  ಯಾರಾದರೂ ಅರ್ಥಮಾಡಿಕೊಳ್ಳಬಹುದಾಗಿದೆಯೆಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ಯಾದವ್ ಮಾತನಾಡಿದರು.
ಜಿಪಂ ಸದಸ್ಯ ಡಿ. ರಮೇಶ್, ತಾಪಂ ಮಾಜಿ ಅಧ್ಯಕ್ಷ ಆನಂದ್, ಗ್ರಾಪಂ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.