ಚಿತ್ರದುರ್ಗ

ಕಾಲೇಜಿಗೆ ಉತ್ತಮ ಫಲಿತಾಂಶ

Published On :

ಭರಮಸಾಗರ: ದಾವಣಗೆರೆ ವಿಶ್ವ ವಿದ್ಯಾಲಯದ ನವಂಬರ್, ಡಿಸೆಂಬರ 2012ರಲ್ಲಿ ನಡೆದ ಪದವಿ 1,3,5,ನೇ ಸೆಮಿಸ್ಟರ್‌ನಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ ದೊರೆತಿದೆ. ಪ್ರಥಮ ಬಿ.ಎ. ಶೇ.70  ದ್ವಿತೀಯ ಬಿ.ಎ. ಶೇ. 80 ಹಾಗೂ ತೃತೀಯ ಬಿ.ಎ. ಶೇ. 100. ಪ್ರಥಮ ಬಿ.ಕಾಂ. ಶೇ 80 ದ್ವಿತೀಯ ಬಿ.ಕಾಂ ಶೇ. 80,  ದ್ವಿತೀಯ ಬಿ.ಬಿ.ಎಂ ಶೇ. 100, ತೃತೀಯ ಬಿ.ಬಿ.ಎಂ. ಶೇ.100 ರಷ್ಟು ಫಲಿತಾಂಶ ಬಂದಿದ್ದು, ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ  ವಿ. ರಮಾದೇವಿ ಮತ್ತು ಸಿಬ್ಬಂದಿ ಶುಭ ಕೋರಿದ್ದಾರೆ.
ಲಿಂಗರಾಜು ನೇಮಕ
ಭರಮಸಾಗರ: ಎಂ.ಜಿ. ಲಿಂಗರಾಜು ಅವರನ್ನು ಚಿತ್ರದುರ್ಗ ಜಿಲ್ಲಾ ಜಾತ್ಯತೀತ ಜನತಾದಳದ ನೇಕಾರ ವಿಭಾಗಕ್ಕೆ ಅಧ್ಯಕ್ಷರನ್ನಾಗಿ ನೇಕಾರ ವಿಭಾಗದ ರಾಜ್ಯಾಧ್ಯಕ್ಷ ಬಿ. ಶ್ರೀನಿವಾಸ್ ನೇಮಕ ಮಾಡಿ ಆದೇಶಿಸಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಬೇಕೆಂದು ನೇಮಕ ಆದೇಶದಲ್ಲಿ ತಿಳಿಸಿದ್ದಾರೆ.
ಇಂದು ಶಾಲಾ ವಾರ್ಷಿಕೋತ್ಸವ
ಭರಮಸಾಗರ: ಪಟ್ಟಣದ ಎಸ್.ಜೆ.ಎಂ. ನರ್ಸರಿ ಹಾಗೂ ಹಿ.ಪ್ರಾ. ಶಾಲೆಯಲ್ಲಿ ಫೆ.8 ರಂದು 2012-13ನೇ ಸಾಲಿನ  ವಾರ್ಷಿಕೋತ್ಸವ ಸಮಾರಂಭ ಶಾಲಾ ಆವರಣದಲ್ಲಿ ಸಂಜೆ 6 ಗಂಟೆಯಿಂದ ನಡೆಯಲಿದೆ. ಶಾಲಾ ಮುಖ್ಯ ಶಿಕ್ಷಕ ಬಿ. ಶಿವರಾಜು ಅಧ್ಯಕ್ಷತೆ ವಹಿಸುವರು. ಗ್ರಾಪಂ ಅಧ್ಯಕ್ಷೆ ಶಶಿಕಲಾ ನಾಗರಾಜ್, ಶಿಕ್ಷಣ ಸಂಯೋಜಕ ಎಂ. ಜಯರಾಮಪ್ಪ, ಜಿಪಂ ಮಾಜಿ ಸದಸ್ಯ ಡಿ.ವಿ. ಶರಣಪ್ಪ, ಜಿಪಂ ಸದಸ್ಯೆ ಲಕ್ಷ್ಮೀ ಮೌನೇಶ್, ತಾಪಂ ಸದಸ್ಯೆ ನಿರ್ಮಲಾ ಮಲ್ಲೇಶ್ ಮೊದಲಾದವರು ಭಾಗವಹಿಸಲಿದ್ದಾರೆ. 2012ರ ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಕಾರ್ಯಕ್ರಮಕ್ಕೆ ಪೋಷಕರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಲು ತಿಳಿಸಿದ್ದಾರೆ.
13ರಂದು ಪದಾಧಿಕಾರಿ ಆಯ್ಕೆ
ಭರಮಸಾಗರ: ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಸ್ಥೆಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಫೆ.13 ರಂದು ಮ.2 ಗಂಟೆಗೆ ಹೊಳಲ್ಕೆರೆ ಹಾಗೂ ಮಧ್ಯಾಹ್ನ 3 ಗಂಟೆಗೆ ಹೊಸದುರ್ಗದ ಪ್ರವಾಸಿ ಮಂದಿರದಲ್ಲಿ ನಡೆಯಲಿದೆ. ಸಂಬಂಧಿಸಿದ ತಾಲೂಕಿನ ಪರಿಶಿಷ್ಟ ಜಾತಿ, ಪಂಗಡಗಳ ನೌಕರರು ವೇಳೆಗೆ ಸರಿಯಾಗಿ ಹಾಜರಿರುವಂತೆ ಜಿಲ್ಲಾಧ್ಯಕ್ಷ ಎಚ್. ಬಸಪ್ಪ, ಟಿ. ಆಂಜನೇಯ, ಭರಮಸಾಗರ ತಿಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.