11ರಂದು ಜಿಪಂಕೆಡಿಪಿ ಸಭೆ
ಚಿತ್ರದುರ್ಗ: ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಫೆ.11ರಂದು ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಅಧ್ಯಕ್ಷರಾದ ಬಿ. ಗೀತಾ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಪಂ ಸಿಇಓ ಕೆ.ಎಂ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ಇಂದು ಗುತ್ತಿಗೆಕಟ್ಟಡ ಉದ್ಘಾಟನೆ
ಮೊಳಕಾಲ್ಮುರು: ಪಟ್ಟಣದ ಕೆ.ಇ.ಬಿ. ಸರ್ಕಲ್ ಸಮೀಪದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತಾಲೂಕು ಗುತ್ತಿಗೆದಾರರ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.11 ರಂದು ಸೋಮವಾರ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಚ್. ಗೋಪಾಲಪ್ಪ, ಜಿಲ್ಲಾ ಉಪಾಧ್ಯಕ್ಷ ಅನ್ವರ್ ಬಾಷ, ಮಾಜಿ ಜಿಲ್ಲಾಧ್ಯಕ್ಷ ಎಂ.ಕೆ. ಅನಂತರೆಡ್ಡಿ, ಪ್ರಥಮ ದರ್ಜೆ ಗುತ್ತಿಗೆದಾರರ ಮಹಮ್ಮದ್ ರಹಮತುಲ್ಲಾ, ಚಳ್ಳಕೆರೆ ತಾಲೂಕು ಸಂಘದ ಅಧ್ಯಕ್ಷ ಹನುಮಂತಪ್ಪ, ಹೊಸದುರ್ಗ ತಾಲೂಕು ಸಂಘದ ಅಧ್ಯಕ್ಷ ನಿರಂಜನ ಮೂರ್ತಿ ಹಾಗೂ ಮೊಳಕಾಲ್ಮುರು ತಾಲೂಕು ಅಧ್ಯಕ್ಷ ಬಿ. ಇಸ್ಮಾಯಿಲ್ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಚಿತ್ರದುರ್ಗ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಬಗ್ಗೆ ಜನಜಾಗೃತಿ ಮೂಡಿಸಲು ಬೀದಿ ನಾಟಕ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ವಿ.ಪಿ. ಇಕ್ಕೇರಿ ತಿಳಿಸಿದ್ದಾರೆ. ಪ್ರದರ್ಶನ ನೀಡಲು ಆಯ್ಕೆಯಾದ ಕಲಾ ತಂಡಗಳು ಜಿಲ್ಲೆಯಲ್ಲಿನ ಹೋಬಳಿಗಳು ಮತ್ತು ಪಟ್ಟಣಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಬೀದಿ ನಾಟಕ ಪ್ರದರ್ಸನ ನೀಡಬೇಕು.
ಕನಿಷ್ಠ 8 ರಿಂದ 10 ಕಲಾವಿದರನ್ನು ಹೊಂದಿದ್ದು ಧ್ವನಿ, ಬೆಳಕು, ಊಟ, ವಸತಿ, ಪ್ರಯಾಣ ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕು. ಆಸಕ್ತರು ಪ್ರತಿ ಪ್ರದರ್ಶನಕ್ಕೆ ತಗಲುವ ವೆಚ್ಚದ ದರವನ್ನು ಅರ್ಜಿಯೊಂದಿಗೆ ಫೆಬ್ರವರಿ 15 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘದ ನಿರ್ದೇಶಕರಿಗೆ ನೀಡಲು ತಿಳಿಸಲಾಗಿದೆ.
ಸಮ್ಮೇಳನದಲ್ಲಿ ಪೀತಾಂಬರ್
ಚಿತ್ರದುರ್ಗ: ವಿಜಾಪುರದಲ್ಲಿ ನಡೆಯುತ್ತಿರುವ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೂರನೇ ದಿನವಾದ ಫೆ.11 ರಂದು ಪ್ರಧಾನ ವೇದಿಕೆಯಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕವಿ ಕೋಲಂನಳ್ಳಿ ಪೀತಾಂಬರ್ ಅವರು ಭಾಗವಹಿಸಿ ಕವನ ವಾಚನ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

