ಚಿತ್ರದುರ್ಗ

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ

Published On :

ಹೊಳಲ್ಕೆರೆ: ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ನೈತಿಕ ಮೌಲ್ಯಯುತ ಶಿಕ್ಷಣ ನೀಡಿ ದೇಶದ ಉತ್ತಮ ಪ್ರಜೆಗಳನ್ನಾಗಿಸಿ ಮಾಜಿ ಶಾಸಕ ಎ.ವಿ. ಉಮಾಪತಿ ಹೇಳಿದರು.
ಪಟ್ಟಣದ ಲಿಟ್ಲ್ ಬರ್ಡ್ಸ್ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದಲ್ಲಿ ಇನ್ನೂ ಶೇ.100ರಷ್ಟು ಸಾಕ್ಷರತೆ ಸಾಧಿಸಲು ಆಗಿಲ್ಲ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಸಲಹೆ ನೀಡಿದರು.
ಜಿಪಂ ಸದಸ್ಯ ಎಸ್.ಜಿ. ರಂಗಸ್ವಾಮಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ನಂತರ ಮಾತನಾಡಿ, ಪಠ್ಯದ ಜೊತೆಗೆ ಸಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸಬೇಕೆಂದರು.
ಜಿಪಂ ಸದಸ್ಯ ಇಂದಿರಾಕಿರಣ್ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಅಧ್ಯಕ್ಷತೆಯನ್ನು ಡಾ. ಉಮಾಪತಿ ವಹಿಸಿದ್ದರು. ಜಿಪಂ ಸದಸ್ಯ ಆರ್. ಪಾರ್ವತಮ್ಮ, ಶಿಕ್ಷಕರ ಸಂಘದ  ಉಪಾಧ್ಯಕ್ಷ ಎ. ಜಯ್ಯಪ್ಪ, ಪಪಂ ಉಪಾದ್ಯಕ್ಷ ಕೆ.ಎಂ. ಲಿಂಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಡಿಕ್ಕಿ ಮಾದವರಾಯ, ಸಿ.ಆರ್.ಪಿ ವಿಜಯಕುಮಾರ್, ಬಸವರಾಜ ಜಾಂಡೇದ್, ಮಂಜುನಾಥ್, ಮುಖ್ಯ ಶಿಕ್ಷಕ ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು. ಮಂಜುಬಾಬು ಸ್ವಾಗತಿಸಿ, ರವಿ  ನಿರೂಪಿಸಿ, ಪರಮೇಶ್ವರಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.