ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ: ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 2013-14ನೇ ಸಾಲಿಗೆ 6ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 12ರವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಉಚಿತವಾಗಿ ವಸತಿ ಸಹಿತ ಶಿಕ್ಷಣ ನೀಡಲಾಗುತ್ತದೆ. ಸಾಮಾನ್ಯ ವರ್ಗ, ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಹಾಗೂ ಮಾಡಿರುವ ವಿದ್ಯಾರ್ಥಿಗಳು 6 ನೇ ತರಗತಿ ವ್ಯಾಸಂಗಕ್ಕಾಗಿ ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ತಾಲೂಕಿನಲ್ಲಿ 4, ಹಿರಿಯೂರು 6, ಹೊಳಲ್ಕೆರೆ 4, ಹೊಸದುರ್ಗ 3, ಚಳ್ಳಕೆರೆ 3, ಮೊಳಕಾಲ್ಮುರು ತಾಲೂಕಿನಲ್ಲಿ 3 ವಸತಿ ಶಾಲೆಗಳಿವೆ. ಈ ಶಾಲೆಗಳಲ್ಲಿ ಪ್ರವೇಶ ಪಡೆಯಲು ಆಯಾ ತಾಲೂಕಿನ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಫೆ.25ರೊಳಗಾಗಿ ಸಲ್ಲಿಸಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆ ಬರುವ ಮಾ.24ರಂದು ನಡೆಯಲಿದೆ. ಮಾಹಿತಿಗಾಗಿ 08194 222937 ದೂರವಾಣಿ ಸಂಪರ್ಕಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

