'ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ಬೆಳೆಸಲು ಸಾಧ್ಯ'
ಭರಮಸಾಗರ: ಮಕ್ಕಳಿಗೆ ಎಳವೆಯಲ್ಲೇ ಉತ್ತಮ ಶಿಕ್ಷಣ ನೀಡುವುದರಿಂದ ಉತ್ತಮ ವ್ಯಕ್ತಿತ್ವ ಬೆಳೆಸಲು ಸಾಧ್ಯ. ದರಿಂದ ಸಮಾಜಕ್ಕೆ ಒಳ್ಳೆಯ ನಾಗರಿಕರು ದೊರೆಯುತ್ತಾರೆ. ಈ ನಿಟ್ಟಿನಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಹಂತದಲ್ಲೇ ವಿದ್ಯಾರ್ಥಿಗಳನ್ನು ಉತ್ತಮ ವಿಚಾರಗಳತ್ತ ಪ್ರೇರೇಪಿಸುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಶಿಕ್ಷಕ ವಿ. ಶಿವರಾಜು ಹೇಳಿದ್ದಾರೆ.
ಅವರು ಪಟ್ಟಣದ ಎಸ್.ಜೆ.ಎಂ ನರ್ಸರಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಪೂರ್ಣ ವ್ಯಕ್ತಿಗಳಾಗಿ ಬೆಳೆಯಲು ಶಿಕ್ಷಣ ಪೂರಕವಾಗುತ್ತದೆ. ಶಿಕ್ಷಣದೊಂದಿಗೆ ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ಪೋಷಕರದ್ದಾಗಿದೆ. ಮಕ್ಕಳೂ ಸಹ ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಅಡ್ಡದಾರಿ ಹಿಡಿಯಲು ಪ್ರೇರಣೆ ನೀಡುವ ಮೊಬೈಲ್ ಟಿವಿಗಳಿಂದ ದೂರವಿರಿಸಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಸಂಯೋಜಕ ಎಂ. ಜಯರಾಮಪ್ಪ ಮತನಾಡಿದರು. ಗ್ರಾಪಂ ಅಧ್ಯಕ್ಷೆ ಶಶಿರೇಖಾ ನಾಗರಾಜ್ ಮಾತನಾಡಿ, ನಮ್ಮ ಮಕ್ಕಳ ಕೌಶಲ್ಯ ಪತ್ತೆ ಹಚ್ಚುವ ಕಾರ್ಯ ನಡೆಯಬೇಕು. ಅವರವರ ಪ್ರತಿಭೆಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು ಎಂದರು.
ತಾಪಂ ಸದಸ್ಯೆ ನಿರ್ಮಲಾ ಮಲ್ಲೇಶ್, ಜಿಪಂ ಸದಸ್ಯೆ ಲಕ್ಷ್ಮೀಮೌನೇಶ್, ಸಹಶಿಕ್ಷಕರಾದ ಬಿ. ಶಿವಪ್ಪ, ಜಿ.ಎಂ.ಪಂಚಾಕ್ಷರಯ್ಯ, ಡಿ.ಎಚ್. ಸಂಗೀತಾ, ಎ. ಭಾರತಮ್ಮ, ಡಿ.ಕೆ. ಮಂಜುಳಾ, ಎಂ.ಸಿ. ಶಿಮೂರ್ತಯ್ಯ, ಎಚ್.ಬಸವರಾಜ್, ಎಸ್.ಆರ್. ತಿಪ್ಪೇಸ್ವಾಮಿ, ಎನ್.ಎಂ. ನಾಗರಾಜಯ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಗಳೇ ಮಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

