ಚಿತ್ರದುರ್ಗ

ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಪರ್ಯಾಯ ವ್ಯವಸ್ಥೆ

Published On :

ಚಿತ್ರದುರ್ಗ: ಜಿಲ್ಲೆಯ ರೋಗಿಗಳಿಗೆ ಚಿಕಿತ್ಸೆ ನೀಡಲು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೆರವು ಪಡೆಯಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವಿಜಯಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಗೆ ಬರುವ ರೋಗಿಗಳನ್ನು ಬಸವೇಶ್ವರ ಆಸ್ಪತ್ರೆಗೆ ಜಿಲ್ಲಾ ಆಸ್ಪತ್ರೆಯ ಖರ್ಚಿನಲ್ಲೇ ಸ್ಥಳಾಂತರ ಮಾಡಲಾಗುತ್ತಿದೆ. ಚಿಕಿತ್ಸೆಯ ವೆಚ್ಚವನ್ನೂ ಜಿಲ್ಲಾ ಆಸ್ಪತ್ರೆ ಆಡಳಿತವೇ ಭರಿಸಲಿದೆ. ಈ ವ್ಯವಸ್ಥೆ ವೈದ್ಯರು ಮುಷ್ಕರ ವಾಪಾಸ್ ಪಡೆಯುವವರೆಗೂ ಮುಂದುವರಿಯುತ್ತದೆ ಎಂದು ತಿಳಿಸಿದರು.
ಎಲ್ಲ ರೋಗಿಗಳಿಗೂ ಚಿಕಿತ್ಸೆ: ಸಣ್ಣ ರೋಗಗಳಿಗೆ ಆಯುಷ್ ವೈದ್ಯರ ನೆರವನ್ನು ಪಡೆಯಲಾಗಿದೆ. ಆಸ್ಪತ್ರೆಗೆ ಬರುವ ಎಲ್ಲ ರೋಗಿಗಳಿಗೂ ಚಿಕಿತ್ಸೆ ದೊರಕುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗೆ ಬರುವ ಬಹುತೇಕ ರೋಗಿಗಳು ಬಡವರೇ ಆಗಿರುತ್ತಾರೆ. ಅವರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಬಸವೇಶ್ವರ ಆಸ್ಪತ್ರೆಯ ನೆರವು ಪಡೆಯಲಾಗಿದೆ. ಇದು ರೋಗಿಗಳಿಗೆ ಸಣ್ಣ ನೆರವು ಎನಿಸಿದರೂ ಇಂತಹ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಚಳ್ಳಕೆರೆ ಮತ್ತು ಹಿರಿಯೂರು ತಾಲೂಕುಗಳಲ್ಲಿ ರೋಗಿಗಳಿಗೆ ತುಂಬಾ ತೊಂದರೆಯಾಗಿದೆ. ಉಳಿದ ತಾಲೂಕುಗಳಾದ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರಿನಲ್ಲಿ ಅಷ್ಟಾಗಿ ತೊಂದರೆ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಆರ್. ಮಹಾಲಿಂಗಪ್ಪ ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಮತ್ತು ಆಯುಷ್ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗಿದೆ. ಆದರೆ, ದೊಡ್ಡ ಪ್ರಮಾಣದ ರೋಗಿಗಳಿಗೆ ಈ ವೈದ್ಯರ ಸೇವೆ ಸಾಕಾಗುತ್ತಿಲ್ಲ ಎಂದರು.
ಸೋಮವಾರ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಯಾವುದೇ ಚಿಕಿತ್ಸೆ ಲಭ್ಯವಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.