ಚಿತ್ರದುರ್ಗ

ತಾಲೂಕು ಘೋಷಣೆಗೆ ಒತ್ತಾಯಿಸಿ ಬಂದ್

Published On :

ಭರಮಸಾಗರ: ನೂತನ ತಾಲೂಕು ರಚನೆಗೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರವನ್ನು ಎಂ.ಬಿ. ಪ್ರಕಾಶ್ ನೇತೃತ್ವದ ಆಯೋಗ ಶಿಫಾರಸು ಮಾಡಿದ್ದರೂ ರಾಜ್ಯ ಸರ್ಕಾರ ಭರಮಸಾಗರವನ್ನು ಕೈಬಿಟ್ಟು ಅನ್ಯಾಯ ಮಾಡಿರುವುದನ್ನು ವಿರೋಧಿಸಿ ಭರಮಸಾಗರ ತಾಲೂಕು ರಚನಾ ಹೋರಾಟ ಸಮಿತಿ ಮತ್ತು ವಿವಿಧ ಸಂಘ ಸಂಸ್ಥೆಗಳು  ಸೋಮವಾರ ತಾಲೂಕು ಘೋಷಣೆಗೆ ಒತ್ತಾಯಿಸಿ ಭರಮಸಾಗರ ಬಂದ್ ನಡೆಸಿದರು.
ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಪ್ರಯುಕ್ತ ಪಟ್ಟಣದ ಬಿಳಿಚೋಡ್ ರಸ್ತೆ, ಆಸ್ಪತ್ರೆ ರಸ್ತೆ,  ಮುಖ್ಯ ರಸ್ತೆಯ ಎಲ್ಲಾ ಅಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಣೆಯಿಂದ ಮುಚ್ಚಿ ಬಂದ್‌ನಲ್ಲಿ ಪಾಲ್ಗೊಂಡಿದ್ದರು.
ಎಂದಿನಂತೆ ಬಸ್ ಸಂಚಾರ: ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದರಿಂದ ವಿದ್ಯಾರ್ಥಿಗಳು ಬಂದ್ ಪ್ರಯುಕ್ತ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಪ್ರಯಾಣಿಕರ ಆಟೋ, ಬಸ್ ಸಂಚಾರ ಎಂದಿನಂತೆ ಇತ್ತು. ಮೆಡಿಕಲ್ ಸ್ಟೋರ್, ಹಾಲು ಮಾರಾಟ ಕೇಂದ್ರ, ಬ್ಯಾಂಕ್ ಸೇರಿದಂತೆ ಕೆಲ ಸರಕಾರಿ ಕಚೇರಿಗಳು ಮಧ್ಯಾಹ್ನದ ನಂತರ ಕಾರ್ಯನಿರ್ವಹಿಸಿದವು. ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ಬಂದ್ ಕಾರಣ ಬೈಪಾಸ್‌ನಲ್ಲಿ ಸಂಚರಿಸಿದವು. ಸಂಜೆ 4 ಗಂಟೆ ನಂತರ ಪಟ್ಟಣದೊಳಗೆ ವಾಹನ ಸಂಚಾರ ಆರಂಭವಾಯಿತು.  
ಬಂದ್‌ನಲ್ಲಿ ಭರಮಸಾಗರ ತಾಲೂಕು ರಚನಾ ಹೋರಾಟದೊಂದಿಗೆ ಮಾಜಿ ಶಾಸಕರಾದ ಎಂ. ಚಂದ್ರಪ್ಪ,  ಎಚ್. ಆಂಜನೇಯ, ಜಿಪಂ ಸದಸ್ಯರು, ತಾಪಂ ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಎಲ್ಲಾ ವಿಧದ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಭರಮಸಾಗರ ತಾಲೂಕು ವ್ಯಾಪ್ತಿಗೆ ಬರುವ ಗ್ರಾಮಗಳ  ಮುಖಂಡರು ಹಾಗೂ ಗ್ರಾಮಸ್ಥರು, ಹಳ್ಳಿಗಳ ಜನರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ವ್ಯಾಪಕ ಬೆಂಬಲ ನೀಡಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.