ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ 10 ಸಾವಿರ ಮನೆ: ಈಶ್ವರಪ್ಪ
ಹೊಸದುರ್ಗ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 10 ಸಾವಿರ ಮನೆಗಳನ್ನು ಸರ್ಕಾರ ನೀಡಲು ನಿರ್ಧರಿಸಿದ್ದು, ಶೀಘ್ರವಾಗಿ ಹಕ್ಕು ಪತ್ರಗಳನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಬುಧವಾರ ತಾಲೂಕಿನ ಕೆಲ್ಲೋಡಿನ ವೇದಾವತಿ ನದಿ ತಟದಲ್ಲಿ ಕನಕ ಗುರು ಪೀಠದ ದಶಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬರದ ನಾಡು ಎನಿಸಿದ ಚಿತ್ರದುರ್ಗ ಜಿಲ್ಲೆಗೆ ವರದಾನವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಹಣ ನೀಡಿಲ್ಲವಾದರೂ ಮೀಸಲಿಟ್ಟಿರುವ ಹಣ ಖರ್ಚಾದಂತೆ ಕಾಮಗಾರಿಗೆ ನಿರಂತರವಾಗಿ ಹಣ ಬಿಡುಗಡೆಯಾಗಲಿದೆ.
ಈ ಬಗ್ಗೆ ಜಿಲ್ಲೆಯ ಜನರಿಗೆ ಸಂದೇಹ ಬೇಡ ಎಂದರು.
ಜಿಲ್ಲೆಗೆ ಆದ್ಯತೆ: ಜಿಲ್ಲೆಯ ತಾಲೂಕು ರಚನೆ ಸಂಬಂಧಿಸಿದಂತೆ ಶಿಫಾರಸುಗಳು ಬಂದಿದ್ದರೂ ನೂತನ 43 ತಾಲೂಕುಗಳ ಪಟ್ಟಿಯಲ್ಲಿ ಯಾವುದೂ ಇಲ್ಲದಿರುವುದಕ್ಕೆ ಉತ್ತರಿಸಿದ ಅವರು, ನಾಲ್ಕು ಆಯೋಗದ ಶಿಫಾರಸಿನಂತೆ ಆಯ್ದ ತಾಲೂಕುಗಳ ರಚನೆ ಮಾಡಲಾಗಿದೆ. ಮುಂದೆ ಇನ್ನಷ್ಟು ತಾಲೂಕುಗಳ ರಚನೆ ಮಾಡುವ ಉದ್ದೇಶ ಸರ್ಕಾರದ ಮುಂದೆ ಇದೆ. ಅದರಲ್ಲಿ ಚಿತ್ರದುರ್ಗ ಜಿಲ್ಲೆಗೆ ಆದ್ಯತೆ ನೀಡಲಾಗುವುದು ಎಂದರು.
ಸಿದ್ಧರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದಾನಿಂದಲೂ ಉತ್ತಮವಾಗಿ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕಾರ್ಯನಿರ್ವಹಿಸಿಲ್ಲ. ವಿಧಾನ ಮಂಡಲದ ಹೊರಗೂ ಒಳಗೂ ಟೀಕೆ ಮಾಡುವುದೇ ಕೆಲಸವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

