ದುಶ್ಚಟ ತ್ಯಜಿಸಿ ಉದ್ಯೋಗಕ್ಕೆ ಆದ್ಯತೆ ನೀಡಿ: ಸುನೀತಾ
ಚಿತ್ರದುರ್ಗ: ಕೊಳಗೇರಿ ಪ್ರದೇಶ ಸೇರಿದಂತೆ ಹಲವೆಡೆ ಜನತೆ ಮಾದಕ ವಸ್ತುಗಳಿಗೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದು, ಕುಟುಂಬ ವರ್ಗ ಬಲಿಯಾಗುತ್ತಿದೆ. ದುಶ್ಚಟಗಳನ್ನು ತ್ಯಜಿಸಿ ಶಿಕ್ಷಣಕ್ಕೆ ಹಾಗೂ ಉದ್ಯೋಗಕ್ಕೆ ಅದ್ಯತೆ ನೀಡಿದರೆ ಸುಂದರ ಜೀವನವಾಗುವುದು ಅರೋಗ್ಯದಿಂದ ಕುಟುಂಬ ರಕ್ಷಣೆಯಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ ತಿಳಿಸಿದರು.
ನಗರಸಭೆ ವತಿಯಿಂದ ಗಾಂಧಿನಗರದ ಬಳಿ ಇರುವ ಬಾಬು ಜಗಜೀವನರಾಂ ನಗರದಲ್ಲಿ ಗುರುವಾರ ನಡೆದ ನಗರಸಭೆ ನಿಧಿಯ ಶೇ.22.75 ರ ಯೋಜನೆಯಡಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಬಡವರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿದರೆ ಆರೋಗ್ಯದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ಅರೋಗ್ಯದ ಬದುಕಿನಿಂದ ಮಾತ್ರ ಸಮಾಜ ಉದ್ಧಾರ ಸಾಧ್ಯವೆಂದು ತಿಳಿಸಿದರು.
ಜೀವನ ರೂಪಿಸಿಕೊಳ್ಳಿ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಸದಸ್ಯೆ ರುದ್ರಾಣಿ ಗಂಗಾಧರ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಾಗಿ ಬಡವರು ಹಾಗೂ ಕಾರ್ಮಿಕರು ಇದ್ದು, ನಗರಸಭೆಯಿಂದ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ನಗರಸಭೆಯ ನಾಮ ನಿರ್ದೇಶಿತ ಸದಸ್ಯ ಎನ್.ಇ. ನಾಗರಾಜ್, ಸುನೀತಾ ಹಾಗೂ ದೇವೇಂದ್ರಪ್ಪ ಮಾತನಾಡಿ, ಕೊಳಗೇರಿಗಳಲ್ಲಿ ಇರುವ ಜನತೆ ದುಡಿಮೆಯ ಜೊತೆಗೆ ಆರೋಗ್ಯದ ಕಡೆ ಗಮನ ಹರಿಸಬೇಕು. ತಮ್ಮಲಿರುವ ರೋಗಗಳ ಬಗ್ಗೆ ವೈದ್ಯರಿಗೆ ತಿಳಿಸಿ. ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು.
ನಗರಸಭೆಯ ಪೌರಾಯುಕ್ತರಾದ ಎಸ್. ಭಾರತಿ ಮಾತನಾಡಿದರು. ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ನುರಿತ ವೈದ್ಯ ಡಾ. ಹಂಸಲೇಖಾ, ಡಾ. ಇಂದಿರಾಬಾಯಿ, ಡಾ. ಸುರಭಿ ಹಾಗೂ ಸಿಬ್ಬಂದಿ ವರ್ಗದವರಿಂದ ಆರೋಗ್ಯ ತಪಾಸಣೆಯನ್ನು ನಡೆಸಿ ಉಚಿತವಾಗಿ ಔಷಧ ನೀಡಲಾಯಿತು.
ಗಾಂಧಿನಗರ ಹಾಗೂ ಬಾಬು ಜಗಜೀವನರಾಂನಗರ ಸಾಧಿಕ್ ನಗರದ ಜನತೆ ಶಿಬಿರದಲ್ಲಿ ಭಾಗವಹಿಸಿ ಚಿಕಿತ್ಸೆ ಪಡೆದುಕೊಂಡರು. ಕಂದಾಯಾಧಿಕಾರಿ ದುರ್ಗೇಶ್ ಸ್ವಾಗತಿಸಿದರು. ಯೋಗೇಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

