ಚಿತ್ರದುರ್ಗ

ಚಲನಚಿತ್ರ ಸಮಾಜಮುಖಿಯಾಗಲಿ: ಶ್ರೀ

Published On :

ಚಿತ್ರದುರ್ಗ: ಚಲನಚಿತ್ರ ಮಾಧ್ಯಮ ಪ್ರಭಾವಿ ಮಾಧ್ಯಮವಾಗಿ ಕೆಲಸ ಮಾಡುತ್ತಿದ್ದು, ಸಮಾಜದ ಸಮಸ್ಯೆ, ಒಳಿತು-ಕೆಡುಕುಗಳ ಬಗ್ಗೆ ನೈಜತೆ ಮೂಡಿಸುವಲ್ಲಿ ಚಲನಚಿತ್ರ ಸಮಾಜಮುಖಿಯಾಗಿರಬೇಕು ಎಂದು ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರ ತಬರನಕಥೆ, ದ್ವೀಪ ಚಲನಚಿತ್ರಗಳ ಪ್ರದರ್ಶನದ ನಂತರ ನಡೆದ ಸಂವಾದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿಮಾತನಾಡಿದರು.
ಸಾಮಾಜಿಕ ಸ್ಥಿತಿ: ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ತಬರನಕಥೆ ಚಲನಚಿತ್ರ ಸುಮಾರು 25 ವರ್ಷ ಹಿಂದೆ ತೆಗೆದಂತಹ ಚಿತ್ರ. ಅಂದಿನ ಸಾಮಾಜಿಕ ವ್ಯವಸ್ಥೆ, ಸ್ಥಿತಿಯ ಬಗ್ಗೆ ತೆಗೆದಿರುವಂತ ಚಿತ್ರಗಳು ಪ್ರಸ್ತುತವಾಗಿದೆ ಎಂದರು.
 ಸಂವಾದದಲ್ಲಿ ಪಾಲ್ಗೊಂಡಿದ್ದ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಮಾತನಾಡಿ, ಸಾಮಾಜಿಕ ಪರಿವರ್ತನೆ, ಸುಧಾರಣೆ ತರುವ ನಿಟ್ಟಿನಲ್ಲಿ ಮಾನವೀಯ ಮೌಲ್ಯ ಇತ್ಯಾದಿ ವಿಷಯಾಧಾರಿತ ಒಳ್ಳೆಯ ಚಿತ್ರ ಕೊಟ್ಟಲ್ಲಿ ಒಳ್ಳೆಯ ಸಿನಿಮಾ ಯಾವತ್ತೂ ಉಳಿಯುತ್ತವೆ ಎಂದರು.
 ಪ್ರಶಸ್ತಿ ವಿಜೇತ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನರ ಜೀವನ, ಸಾಮಾಜಿಕ ಸುಧಾರಣೆ ತರುವಲ್ಲಿ ಹೆಚ್ಚು ಅನುಕೂಲವಾಗುವ ದಿಸೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾಡಳಿತದ ಸಹಕಾರದೊಂದಿಗೆ ಇಂತಹ ಚಿತ್ರ ಪ್ರದರ್ಶನ ವ್ಯವಸ್ಥೆ ಕಲ್ಪಿಸುವುದಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.