ಜ್ಞಾನ ವಿಕಾಸ ಕೇಂದ್ರ ಮಹತ್ವದ ವಿಷಯ
ಕ.ಪ್ರ.ವಾರ್ತೆ ಹಿರಿಯೂರು ಮಾ.7
ಪೌಷ್ಠಿಕ ಆಹಾರ, ಸ್ವಚ್ಛತೆ, ಆರೋಗ್ಯ, ಇಲಾಖಾವಾರು ಸೌಲಭ್ಯ, ಕೌಟುಂಬಿಕ ಸಾಮರಸ್ಯದಂತಹ ಸಂಗತಿಗಳ ಮೇಲೆ ಹೆಚ್ಚು ಗಮನಹರಿಸಿ ಮಹಿಳಾ ಜ್ಞಾನ ವಿಕಾಸ ಕೇಂದ್ರಗಳನ್ನು ರೂಪಿಸಲಾಗುತ್ತಿರುವುದು ಮಹತ್ವದ ವಿಷಯವಾಗಿದೆ ಎಂದು ತಾಲೂಕು ಕೃಷಿ ಅಧಿಕಾರಿ ಜೈವಂತ್ ತಿಳಿಸಿದರು.
ತಾಲೂಕಿನ ಪಿಟ್ಲಾಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಕಾಮಧೇನು ಮಹಿಳಾ ಜ್ಞಾನವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಮಹಿಳೆಯರಿಗೆ ಅಗತ್ಯ ಮಾನಸಿಕ ಮತ್ತು ತಾಂತ್ರಿಕ ತರಬೇತಿ ಲಭ್ಯವಾಗುತ್ತಿಲ್ಲವೆಂದರು.
ಈ ಕಾರಣಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಂಡು ಜ್ಞಾನ ವಿಕಾಸ ಕೇಂದ್ರಗಳ ಮೂಲಕ ಮೂಲಭೂತ ವಿಷಯಗಳನ್ನು ಮನನ ಮಾಡಿಕೊಡುತ್ತಿರುವುದು ಉಪಯುಕ್ತ ಕೆಲಸವಾಗಿದೆ ಎಂದು ಹೇಳಿದರು.
ಸಂಸ್ಥೆ ಕಾರ್ಯ ಅರ್ಥಪೂರ್ಣ: ಮಾಜಿ ಗ್ರಾಪಂ ಅಧ್ಯಕ್ಷ ಜೆ. ಹೊನ್ನಯ್ಯ ಮಾತನಾಡಿ, ಸರಕಾರಗಳು ಕಾಳಜಿಯಿಂದ ಮಾಡಬೇಕಾದ ಕೆಲಸಗಳನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳಂತವು ಮಾಡುತ್ತಿವೆ. ಮಹಿಳೆಯರಿಗೆ ತಮ್ಮ ಬದುಕನ್ನು ರೂಪಿಸಿಕೊಳ್ಳಲು, ಸುತ್ತಲಿನ ಸಮಾಜದ ಅರಿವಿನೊಂದಿಗೆ ವೃತ್ತಿ, ಪ್ರವೃತ್ತಿಗಳನ್ನು ಕೈಗೊಳ್ಳಲು ಇಂತಹ ಸಾಮಾನ್ಯ ಜ್ಞಾನದ ಅವಶ್ಯಕತೆಯಿದೆ ಎಂದು ಹೇಳಿದರು. ಈ ಕಾರಣಕ್ಕೆ ಸಂಸ್ಥೆ ಮಾಡುತ್ತಿರುವ ಕಾರ್ಯ ಅರ್ಥಪೂರ್ಣವಾಗಿದೆಯೆಂದು ಹೇಳಿದರು.
ಗ್ರಾಪಂ ಉಪಾಧ್ಯಕ್ಷೆ ಅನ್ನಪೂರ್ಣೇಶ್ವರಿ, ಸದಸ್ಯ ಉಮಾಪತಿ, ಮೇಲ್ವಿಚಾರಕ ದೇವರಾಜು, ವನಜಾಕ್ಷಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

