ಕಾರ್ಯಕರ್ತರ ಒಗ್ಗಟ್ಟಿಂದ ಕಾಂಗ್ರೆಸ್ ಜಯಭೇರಿ
ಕ.ಪ್ರ ವಾರ್ತೆ, ಹೊಳಲ್ಕೆರೆ, ಮಾ.11
ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿಂದ ದುಡಿದು ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ದಿಕ್ಸೂಚಿ ಎಂದು ಮಾಜಿ ಶಾಸಕ ಎಚ್. ಆಂಜನೇಯ ಹೇಳಿದರು.
ಅವರು ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ನಾವು ಜನತೆಗೆ ನೀಡಿರುವ ಕುಡಿಯುವ ನೀರು, ವಿದ್ಯುತ್ ದೀಪ, ಸ್ವಚ್ಛತೆ, ನಿವೇಶನರಹಿತರಿಗೆ ನಿವೇಶನ ನೀಡುವುದು ಸೇರಿದಂತೆ ವಿವಿದ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಮತದಾರರಿಗೆ ಅಭಿನಂದನೆ: ಪಟ್ಟಣದ ಜನತೆ ಕೆಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ 7 ಸ್ಥಾನ ನೀಡಿದ್ದಕ್ಕೆ ಮತದಾರರನ್ನು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ 2ನೇ ವಾರ್ಡ್ನಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಸಯ್ಯದ್ ಸಯೀದ್ ಕಾಂಗ್ರೆಸ್ಗೆ ಸೇರಿಸಿಕೊಂಡು ಪಪಂನ ಅಧಿಕಾರದ ಗದ್ದುಗೆ ಏರುವುದಾಗಿ ಮಾಜಿ ಶಾಸಕ ಎಚ್. ಆಂಜನೇಯ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ರುದ್ರಪ್ಪ, ಜಿಪಂ ಸದಸ್ಯರಾದ ಪಾರ್ವತಮ್ಮ, ಭಾರತಿ ಕಲ್ಲೇಶ್, ಎಸ್.ಜೆ. ರಂಗಸ್ವಾಮಿ, ಇಂದಿರಾಕಿರಣ್, ಮುಖಂಡರಾದ ಟಿ. ತಿಮ್ಮಪ್ಪ, ಡಿ.ಕೆ. ಶಿವಮೂರ್ತಿ, ಶರತ್ಕುಮಾರ್ ಪಾಟೀಲ್, ಗಿರೀಶ್, ಲೋಹಿತ್ ಕುಮಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

