'ಜನರ ಸೇವೆ ಅಧಿಕಾರಿಗಳ ಕರ್ತವ್ಯ'
ಚಿತ್ರದುರ್ಗ: ಸರ್ಕಾರ ಇರುವುದು ಜನರ ಕಲ್ಯಾಣಕ್ಕಾಗಿ ಆದ್ದರಿಂದ ಸರ್ಕಾರದ ಸೇವೆಗಳನ್ನು ಜನರ ಬಳಿಯೇ ಕೊಂಡೊಯ್ಯಬೇಕೆಂದು ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ತಿಳಿಸಿದರು.
16 ರಂದು ಹೊಳಲ್ಕೆರೆ ತಾಲೂಕಿನ ತೊಡರನಾಳು ಗ್ರಾಮದಲ್ಲಿ ಅಪ್ನಾದೇಶ್ ಅಸೋಸಿಯೇಷನ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದೊಂದಿಗೆ ತೊಡರನಾಳು ಗ್ರಾಮದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ, ಜನರು ವಿವಿಧ ಕಚೇರಿಗಳ ಸೇವೆಗಳಿಗಾಗಿ ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರಗಳಿಗೆ ಬರುವುದನ್ನು ತಪ್ಪಿಸಿ ಅವರ ಬಳಿಯೇ ಸೇವೆ ಒದಗಿಸಬೇಕು ಎಂದರು. ಸಿಇಒನಾರಾಯಣಸ್ವಾಮಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ನಿರ್ದೇಶಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಅಪ್ನಾದೇಶ್ ಕಾರ್ಯನಿರ್ವಾಹಕ ಕಾರ್ಯದರ್ಶಿ ಇ. ಬಸವರಾಜು, ತಾಪಂ ಸದಸ್ಯೆ ಪ್ರೇಮ ಧನಂಜಯ, ಜನಾರ್ದನ್, ಗಿರಿಜಾ ನಂಜುಂಡಪ್ಪ, ಮಲ್ಲಿಕಾರ್ಜುನಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

