ಮತದಾನ ಬಹಿಷ್ಕಾರದಿಂದ ಹಿಂದೆ ಸರಿದಿಲ್ಲ: ಸೇಸಪ್ಪ
ವಿಟ್ಲ: ಚುನಾವಣಾ ನೀತಿ ಸಂಹಿತೆಗೆ ದಲಿತ್ ಸೇವಾ ಸಮಿತಿಯ ಕಡೆಯಿಂದ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮೇರೊಟ್ಟು ನಿವಾಸಿಗಳು ಕನ್ಯಾನದಲ್ಲಿ ಅಳವಡಿಸಿದ ಮತದಾನ ಬಹಿಷ್ಕಾರದ ಬ್ಯಾನರ್ ಅನ್ನು ತೆರವು ಮಾಡುತ್ತೇವೆ ವಿನಃ ಚುನಾವಣೆ ಬಹಿಷ್ಕಾರದಿಂದ ಹಿಂದೆ ಸರಿದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ತಿಳಿಸಿದರು. ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ಯಾನ ಗ್ರಾಮದ ಮೇರೊಟ್ಟು ಎಂಬಲ್ಲಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಲವಾರು ಮನೆಗಳಿದ್ದು, ರಸ್ತೆ ಸಂಪರ್ಕವಿಲ್ಲದೆ ಪರದಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿ, ಬಂಟ್ವಾಳ ಶಾಸಕರಿಗೆ, ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿಯೂ ಅದಕ್ಕೆ ಬೆಲೆ ಕೊಡದ ಹಿನ್ನೆಲೆಯಲ್ಲಿ ಮೇರೊಟ್ಟು ನಿವಾಸಿಗಳು ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿ ಪರವಾನಗಿ ಪಡೆದು ಬ್ಯಾನರ್ ಅಳವಡಿಸಿದ್ದರು. ಆದರೆ, ಈಗ ಚುನಾವಣೆ ಹತ್ತಿರ ಬಂದಿದ್ದು, ಅದು ನೀತಿ ಸಂಹಿತೆಗೆ ಅಡ್ಡಿಯಾಗುತ್ತದೆ ಎಂದು ಅಧಿಕಾರಿಗಳು ಹೇಳಿರುವ ಹಿನ್ನೆಲೆಯಲ್ಲಿ ಮತ್ತು ಮುಂದಿನ ದಿನಗಳಲ್ಲಿ ಸರಿಯಾಗಿ ರಸ್ತೆ ನಿರ್ಮಿಸುವ ಭರವಸೆಯನ್ನು ಸಹಾಯಕ ಕಮೀಷನರ್ ನೀಡಿರುವ ಹಿನ್ನೆಲೆಯಲ್ಲಿ ಬ್ಯಾನರ್ ಅನ್ನು ಅಲ್ಲಿಂದ ತೆರವು ಮಾಡುತ್ತೇವೆ ಹೊರತು ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಮೇರೊಟ್ಟು ನಿವಾಸಿಗಳಾದ ಲೋಕೇಶ್, ಚನಿಯಪ್ಪ, ಗೀತಾ, ನವೀನ್, ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ವಿಟ್ಲ, ಕೃಷ್ಣಪ್ಪ ಪುದ್ದೊಟ್ಟು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

