ಆಹಾರ ಉತ್ಪಾದನೆಯಲ್ಲಿ ಭಾರತ ಇನ್ನೂ ಸ್ವಾವಲಂಬನೆಯಾಗಿಲ್ಲ: ಡಾ.ಚಂದ್ರಶೇಖರ
ಕಾಂತಾವರ: ನಮ್ಮ ದೇಶ ಆಹಾರದಲ್ಲಿ ಸ್ವಾವಲಂಬನೆ ಸಾಧಿಸಿದ್ದು, ರಫ್ತು ಮಾಡುವಷ್ಟು ಉತ್ಪಾದನೆಯಿದೆ ಎನ್ನುವ ನಾಯಕರ ಹೇಳಿಕೆಗಳಲ್ಲಿ ಹುರುಳಿಲ್ಲ. ನಿಜಕ್ಕೂ ಭಾರತ ಆಹಾರ ಉತ್ಪಾದನೆಯಲ್ಲಿ ಇನ್ನೂ ಸ್ವಾವಲಂಬನೆ ಸಾಧಿಸಿಲ್ಲ ಎಂದು ಕೃಷಿಕ, ಪರಿಸರವಾದಿ ಡಾ.ಡಿ. ಚಂದ್ರಶೇಖರ ಹೇಳಿದರು.
ಅವರು ಕಾಂತಾವರ ಅಲ್ಲಮಪ್ರಭು ಪೀಠದ ತಿಂಗಳ ಸಾಹಿತ್ಯ ಸಂಸ್ಕೃತಿ ಸಂವರ್ಧನ ಕಾರ್ಯಕ್ರಮದಲ್ಲಿ ಇತ್ತೀಚೆಗೆ 'ಕೃಷಿ ಸಂಸ್ಕೃತಿಟ ಸಮಕಾಲೀನ ಸವಾಲುಗಳು' ವಿಷಯದ ಕುರಿತು ಮಾತನಾಡಿದರು.
ಸ್ವಾತಂತ್ರ್ಯದ ನಂತರ ಜನಸಂಖ್ಯೆ ಏರಿಕೆಗೆ ಅನುಗುಣವಾಗಿ ಆಹಾರ ಉತ್ಪಾದನೆಯಲ್ಲಿನ ಪ್ರಗತಿ ನಿರಾಶಾದಾಯಕವಾಗಿದೆ. ಹಸಿರು ಕ್ರಾಂತಿಯಿಂದಾಗಿ ನೈಸರ್ಗಿಕ ಸಂಪತ್ತಿನ ಮೇಲೆ ಆಕ್ರಮಣ ನಡೆಸಿ ವಾಣಿಜ್ಯ ಬೆಳೆಗಳಿಗೆ ಹೆಚ್ಚು ಒತ್ತು ನೀಡಿದ್ದರಿಂದ ನಗರೀಕರಣ ಬೆಳೆಯಿತು ಹೊರತು ಆಹಾರೋತ್ಪಾದನೆಯಲ್ಲಿ ಗಣನೀಯ ಏರಿಕೆಯಾಗಿಲ್ಲ ಎಂದರು.
ಕೃಷಿ ದಾರಿ ತಪ್ಪಿದರೆ ಯಾವ ರಂಗವೂ ಅದನ್ನು ಸರಿಪಡಿಸಲಾಗದು. ದೇಶ ಅಪಾಯದ ಅಂಚಿಗೆ ಹೋಗುವುದನ್ನು ತಡೆಗಟ್ಟುವ ಜವಾಬ್ದಾರಿ ರೈತರ ಮೇಲಿದೆ ಎಂದರು. ಡಾ.ಡಿ. ಚಂದ್ರಶೇಖರ ಅವರನ್ನು ಸನ್ಮಾನಿಸಲಾಯಿತು. ಸಿ.ಕೆ. ಪಡಿವಾಳ್, ಮಂಗಳೂರಿನ ರಾಮಕೃಷ್ಣ ಆಶ್ರಮದ ಬ್ರಹ್ಮಚಾರಿ ಸ್ವಾಮಿ ಆತ್ಮರೂಪ ಚೈತನ್ಯ ಇದ್ದರು. ಗಾಯಕರಾದ ಚಂದ್ರಶೇಖರ ಕೆದಿಲಾಯ ಅವರ ವಚನ ಗಾಯನದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಸಂಚಾಲಕ ಡಾ. ಗಣನಾಥ ಎಕ್ಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಲೂರು ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಡಾ.ನಾ. ಮೊಗಸಾಲೆ ಸ್ವಾಗತಿಸಿ, ಯಶೋಧರಾ ಪಿ. ಕರ್ಕೇರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

